ಚಿತ್ರದುರ್ಗದಲ್ಲಿ ಇಂಡಸ್ಟ್ರಿಯಲ್ ಟೌನ್ ಶಿಪ್ ನಿರ್ಮಾಣ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಚಿತ್ರದುರ್ಗ: ಮುರುಘಾ ಶರಣರ ಆಶಯದಂತೆ ಜಿಲ್ಲೆಯಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್‌ಶಿಪ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುರುಘಾ ಮಠದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಶರಣ ಸಂಸ್ಕೃತಿ ಉತ್ಸವದ ಸಮಾರೋಪ ಹಾಗೂ ಮುರುಘಾ ಶ್ರೀಗಳ ಪೀಠಾರೋಹಣದ ತೃತೀಯ ದಶಮಾನೋತ್ಸವ, ಗುರುವಂದನೆ ಸಮಾರಂಭದಲ್ಲಿ ಭಾಗವಹಿಸಿ ಬಸವ ಭೂಷಣ ಪ್ರಶಸ್ತಿ ಸ್ವೀಕರಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಕೈಗಾರಿಕಾ ಟೌನ್‍ಶಿಪ್ ಮಾಡಲು ಸಿದ್ದನಿದ್ದೇನೆ. ಜಿಲ್ಲಾಧಿಕಾರಿಗಳು ಚಿತ್ರದುರ್ಗದಲ್ಲಿ 1 ಸಾವಿರದಿಂದ 2 ಸಾವಿರ ಎಕರೆ ಭೂಮಿಯನ್ನು ಗುರುತಿಸಿದರೆ ನಾನು ಈ ಕಾರ್ಯ ಮಾಡಲು ಸಿದ್ದನಿದ್ದೇನೆ” ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದರು.

ಬಿ. ಎಸ್‌. ಯಡಿಯೂರಪ್ಪ ಭದ್ರಾ ಮೇಲ್ದಂಡೆ ಯೋಜನೆಯನ್ನು ಆರಂಭಿಸಿ ಬರದ ನಾಡಾದ ಚಿತ್ರದುರ್ಗಕ್ಕೆ ನೀರಾವರಿ ಸೌಲಭ್ಯವನ್ನು ಹರಿಸಲು ನೆರವಾಗಿದ್ದಾರೆ. ಇದೊಂದು ಜನಪರ ಕೆಲಸ” ಎಂದು ಹೇಳಿದರು. ಶರಣರ ಜನ್ಮದಿನವನ್ನು ಸಮಾನತೆ ದಿನವನ್ನಾಗಿ ಆಚರಿಸಲು ಚಿಂತನೆ ನಡೆಸುವುದಾಗಿ ತಿಳಿಸಿದರು. ಮುರುಘಾ ಮಠದ ಶರಣರು ಶಿಷ್ಯ ಬಳಗದವರು ಮುರುಘಾ ಶರಣರ ಜನ್ಮದಿನವನ್ನು ಸಮಾನತೆ ದಿನವನ್ನಾಗಿ ಘೋಷಿಸಬೇಕು ಎಂದು ಮನವಿ ಮಾಡಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಡಾ.ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಈ ಪ್ರದೇಶದಿಂದ ಬಿಜೆಪಿಯಲ್ಲಿ ಐದು ಶಾಸಕರು ಇದ್ದರೂ, ಜಿಲ್ಲೆಗೆ ಅಭಿವೃದ್ಧಿ ಯೋಜನೆಗಳನ್ನು ಮಂಜೂರು ಮಾಡಲು ಅವರು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ವಿಷಾದಿಸಿದರು. ಇತರ ಜಿಲ್ಲೆಗಳಿಗೆ ಹೋಲಿಸಿದರೆ ಚಿತ್ರದುರ್ಗವು ಅಭಿವೃದ್ಧಿಯ ಕೊರತೆಯನ್ನು ಎದುರಿಸುತ್ತಿದೆ. ಜಿಲ್ಲೆಯು ಬಜೆಟ್ ನಲ್ಲಿ ಕಡಿಮೆ ಹೊಂದಿದೆ. ಜಿಲ್ಲೆಗೆ ಕೈಗಾರಿಕಾ ಅಭಿವೃದ್ಧಿ ಅಗತ್ಯವಿದೆ. ನಗರವು ಸ್ಮಾರ್ಟ್ ಸಿಟಿಯಾಗಬೇಕು. ಜಿಲ್ಲೆಯ ಅಭಿವೃದ್ಧಿಗೆ ಸಿಎಂ ಆದ್ಯತೆ ನೀಡುತ್ತಾರೆ ಎಂದು ನಾನು ಭಾವಿಸುತ್ತೇನೆ ಶ್ರೀಗಳು ಹೇಳಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *