ಮೀಸಲಾತಿ ಹೆಚ್ಚಿಸುವುದು ದೊಡ್ಡ ಸವಾಲು: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಎಸ್.ಟಿ ಮೀಸಲಾತಿ ಬೇಡಿಕೆ ವಿಚಾರವಾಗಿ ಕಾನೂನು ಚೌಕಟ್ಟಿನಲ್ಲಿ ಬಗೆಹರಿಸುವ ನಿಟ್ಟಿನಲ್ಲಿ ಸಲಹೆ ಪಡೆಯಲು ಕಾನೂನು ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಎಲ್ಲ ಸಮುದಾಯದ ಆಶೋತ್ತರಕ್ಕೆ ನ್ಯಾಯ ಒದಗಿಸುವ ಪ್ರಯತ್ನ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬುಧವಾರ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೀಸಲಾತಿ ಮಿತಿ 50 ಶೇಕಡಾ ಇದ್ದು ಎಲ್ಲ ಸಮುದಾಯದಿಂದ ಬೇಡಿಕೆ ಹೆಚ್ಚಾಗಿದೆ. ಇದನ್ನು ಅರ್ಥ ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿ 10 ಶೇ ಆರ್ಥಿಕ ಹಿಂದುಳಿದವರಿಗೆ ಮೀಸಲಾತಿ ನೀಡುವ ತೀರ್ಮಾನ ಮಾಡಿದ್ದಾರೆ. ಮೀಸಲಾತಿ ಹೆಚ್ಚಳ ವಿಚಾರವಾಗಿ ಪುನರ್ ಚರ್ಚೆ ಹಾಗೂ ತೀರ್ಮಾನ ಆಗಬೇಕಿದೆ. ಮೀಸಲಾತಿ ಬೇಡಿಕೆ ಹಿನ್ನೆಲೆಯಲ್ಲಿ ಕಾನೂನು ಚೌಕಟ್ಟಿನಲ್ಲಿ ಬಗೆಹರಿಸುವ ಬಗ್ಗೆ ಕಾನೂನು ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಎಲ್ಲ ಸಮುದಾಯದ ಆಶೋತ್ತರಕ್ಕೆ ನ್ಯಾಯ ಒದಗಿಸುವ ಪ್ರಯತ್ನ ನಡೆಸಲಾಗುವುದು. ಈ ನಿಟ್ಟಿನಲ್ಲಿ ಪ್ರಸನ್ನಾನಂದಪುರಿ ಶ್ರೀಗಳ ಸಹಕಾರ ಬೇಕಿದೆ ಎಂದು ಬೊಮ್ಮಾಯಿ ಮನವಿ ಮಾಡಿದರು.

ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಯಾಗಿದೆ. ನಮ್ಮನ್ನು ನಾವೇ ಮೌಲ್ಯಮಾಪನ ಮಾಡಿ, ಆತ್ಮವಿಶ್ವಾಸದೊಂದಿಗೆ ಮುನ್ನಡೆಯುವ ದಿನ ಇದಾಗಿದೆ. ಸಾಹಿತ್ಯದ ಜಗತ್ತನ್ನು ಬದಲಾವಣೆ ಮಾಡಿದ ಶ್ರೇಷ್ಠ ವ್ಯಕ್ತಿತ್ವ ವಾಲ್ಮೀಕಿಯದ್ದು, ಅವರದ್ದು ಕಾಲಾತೀತರಾಗಿರುವ ವ್ಯಕ್ತಿತ್ವವಾಗಿದೆ. ಮನಕುಲ ಇರುವವರೆಗೂ ವಾಲ್ಮೀಕಿ ಚಿಂತನೆ ಜೀವಂತವಾಗಿರುತ್ತದೆ.
ಭಾರತಕ್ಕೆ ಸಂಸ್ಕೃತಿ ಕೊಟ್ಟ ಏಕಮೇವ ಕವಿ ವಾಲ್ಮೀಕಿ. ಎಸ್ ಟಿ ಸಮುದಾಯಕ್ಕೆ ಪ್ರತ್ಯೇಕ ಸಚಿವಾಲಯದ ಬೇಡಿಕೆ ಇಟ್ಟಿದ್ದರು.ಈ ನಿಟ್ಟಿನಲ್ಲಿ ಪ್ರತ್ಯೇಕ ಸಚಿವಾಲಯ ಘೋಷಣೆಯನ್ನು ನಾನು ಸಿಎಂ ಆದ ಬಳಿಕ ಮಾಡಿದೆ. ಎಸ್ ಟಿ ಎಸ್ ಸಿ ಸಮುದಾಯಕ್ಕೆ‌ ಅತೀ ಹೆಚ್ಚು ಜಮೀನು ನೀಡಲು‌ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಎಸ್ ಟಿ ಎಸ್ ಸಿ ಹೆಣ್ಣುಮಕ್ಕಳಿಗೆ ಸ್ವಯಂ ಉದ್ಯೋಗಕ್ಕೆ ದೊಡ್ಡ ಪ್ರಮಾಣದಲ್ಲಿ ಸಹಾಯ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.‌

 

ಮೀಸಲಾತಿ ಕುರಿತು ಪುನರ್‌ ಚರ್ಚೆ, ಪುನರ್‌ ತೀರ್ಮಾನ ಇಡೀ ದೇಶದಲ್ಲಿ ಆಗಬೇಕಿದೆ. ಎಲ್ಲ ಸಮುದಾಯಗಳ ಆಶೋತ್ತರಗಳು ಹೆಚ್ಚಾಗಿದೆ. ಇದನ್ನು ಅರ್ಥ ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿ ಆರ್ಥಿಕವಾಗಿ ದುರ್ಬಲ ಇದ್ದವರಿಗೂ ಶೇ 10ರಷ್ಟು ಮೀಸಲಾತಿ ತೀರ್ಮಾನ ತೆಗೆದುಕೊಂಡಿದ್ದಾರೆ‘ ಎಂದರು. ‘ನಾನು ಮುಖ್ಯಮಂತ್ರಿ ಆಗುತ್ತಿದ್ದಂತೆ ಎಸ್‌ಟಿ ಜನಾಂಗಕ್ಕೆ ಪ್ರತ್ಯೇಕ ಸಚಿವಾಲಯ ರಚನೆ ಮಾಡಿದ್ದೇನೆ. ಇಲಾಖೆಗೆ  7,600 ಕೋಟಿ ರು.ಅನುದಾನ ನೀಡಲಾಗಿದೆ. ಸಮುದಾಯದ ಅಭಿವೃದ್ಧಿಗೆ ಇದು ಸಹಾಯಕವಾಗಲಿದೆ. ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಭೂ ಒಡೆತನ ಕಾರ್ಯಕ್ರಮ ಮಾಡಿದ್ದೇವೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜಮೀನು ಕೊಡಬೇಕು ಎನ್ನುವುದು ನನ್ನ ಸರ್ಕಾರದ ಸಂಕಲ್ಪ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಈ ಮೂರು ಸೂತ್ರಗಳಿಂದ ಸಮಾಜ ಕಲ್ಯಾಣ ಇಲಾಖೆಯನ್ನು ನಡೆಸಲು ತೀರ್ಮಾನಿಸಿದ್ದೇನೆ’ ಎಂದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *