ಪೆಟ್ರೋಲ್, ಡೀಸೆಲ್‌ ದರದಲ್ಲಿ ಮತ್ತೆ ಏರಿಕೆ; ಇಂದು ನಿಮ್ಮ ನಗರದ ತೈಲ ಬೆಲೆ ವಿವರ ತಿಳಿಯಿರಿ

ಹೊಸದಿಲ್ಲಿ: ಪೆಟ್ರೋಲ್‌, ಡೀಸೆಲ್‌ ದರ ಕಂಡು ಜನ ಸಾಮಾನ್ಯರು ನಿಗಿ ನಿಗಿ ಕೆಂಡವಾಗುತ್ತಿರುವ ಮಧ್ಯೆ ದೇಶದಲ್ಲಿ ಇಂಧನ ದರ ಇಂದು ಮತ್ತೆ ಏರಿಕೆಯಾಗಿದೆ. ಕಳೆದ ಅನೇಕ ಸಮಯದಿಂದ ದಿನ ನಿತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಕಾಣುತ್ತಿದ್ದು, ಅಕ್ಟೋಬರ್‌ 29ನೆಯ ದಿನವಾದ ಇಂದು (ಶುಕ್ರವಾರ) ಬೆಂಗಳೂರಿನಲ್ಲಿ ಒಂದು ಲೀಟರ್‌ ಪೆಟ್ರೋಲ್‌ಗೆ 37 ಪೈಸೆ ಏರಿಕೆಯಾದರೆ, ಡೀಸೆಲ್‌ಗೆ 37 ಪೈಸೆ ಏರಿಕೆಯಾಗಿದೆ. ಆ ಮೂಲಕ ಮತ್ತೊಮ್ಮೆ ತೈಲ ದರದಲ್ಲಿ ಏರಿಕೆ ಕಂಡಿದೆ.

ಜನರ ಅತ್ಯವಶ್ಯಕ ವಸ್ತುವಾಗಿರುವ ಇಂಧನ ದರ ಏರಿಕೆಯಿಂದ ಜನ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇನ್ನೊಂದೆಡೆ ರಾಜ್ಯ ಹಾಗೂ ಕೇಂದ್ರಗಳು ಪೆಟ್ರೋಲ್‌, ಡೀಸೆಲ್‌ ಮೇಲೆ ವಿಧಿಸಿರುವ ಸುಂಕವನ್ನು ಕಡಿತಗೊಳಿಸುವಂತೆ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಆದರೆ ಸುಂಕ ಕಡಿತಗೊಳಿಸುವುದಿಲ್ಲ ಎಂದು ಈಗಾಗಲೇ ಕೇಂದ್ರ ಸ್ಪಷ್ಟನೆ ನೀಡಿದೆ. ಈ ಮಧ್ಯೆ ಪೆಟ್ರೋಲ್‌, ಡೀಸೆಲ್‌ ದರ ಸದ್ಯಕ್ಕೆ ಕಡಿಮೆಯಾಗುವ ಮಾತಿರಲಿ, ಅದು ಇನ್ನಷ್ಟು ಹೆಚ್ಚಾಗಲಿದೆ ಎಂದು ಜಾಗತಿಕ ಹಣಕಾಸು ಸಂಸ್ಥೆ ಗೋಲ್ಡ್‌ಮನ್‌ ಸ್ಯಾಕ್ಸ್‌ ತಿಳಿಸಿದೆ. ಪ್ರಸ್ತುತ ಪ್ರತಿ ಬ್ಯಾರೆಲ್‌ಗೆ 85 ಡಾಲರ್‌ ಇರುವ ಬ್ರೆಂಟ್‌ ಕಚ್ಚಾ ತೈಲ ದರ ಮುಂದಿನ ವರ್ಷ ಶೇ.30ರಷ್ಟು ಹೆಚ್ಚಳದೊಂದಿಗೆ 110 ಡಾಲರ್‌ಗೆ ಏರಿಕೆಯಾಗುವ ನಿರೀಕ್ಷೆ ಇದೆ ಎಂದು ಸಂಸ್ಥೆಯ ವರದಿ ತಿಳಿಸಿದೆ. ಇತ್ತ ಬೆಲೆ ಏರಿಕೆಯಿಂದ ಕೋಪಗೊಂಡಿರುವ ಜನ ಸಾಮಾನ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹಿಡಿ ಶಾಪ ಹಾಕ್ತಿದ್ದಾರೆ.

ಬೆಲೆ ಪರಿಷ್ಕರಣೆಗೊಂಡ ಬಳಿಕ ದೇಶದ ಪ್ರಮುಖ ಮಹಾ ನಗರಗಳಲ್ಲಿ ಇಂದಿನ ತೈಲ ದರಗಳತ್ತ ಗಮನಹರಿಸುವುದಾದರೆ.
ರಾಷ್ಟ್ರ ರಾಜಧಾನಿ ಹೊಸದಿಲ್ಲಿ
ಪೆಟ್ರೋಲ್: ₹108.64, ಡೀಸೆಲ್: ₹97.37

ಪಶ್ಚಿಮ ಬಂಗಾಳದ ಕೋಲ್ಕೊತ್ತಾ
ಪೆಟ್ರೋಲ್ : ₹109.12, ಡೀಸೆಲ್ : ₹100.49

ಮಹಾರಾಷ್ಟ್ರ ರಾಜಧಾನಿ ಮುಂಬಯಿ
ಪೆಟ್ರೋಲ್ : ₹114.47, ಡೀಸೆಲ್ : ₹105.49

ತಮಿಳುನಾಡು ರಾಜಧಾನಿ ಚೆನ್ನೈ
ಪೆಟ್ರೋಲ್ : ₹105.43, ಡೀಸೆಲ್ : ₹101.59

ಸಿಲಿಕಾನ್ ಸಿಟಿ ಬೆಂಗಳೂರು
ಪೆಟ್ರೋಲ್: ₹112.43, ಡೀಸೆಲ್: ₹103.35

ಕಡಲನಗರಿ ಮಂಗಳೂರು
ಪೆಟ್ರೋಲ್: ₹111.58, ಡೀಸೆಲ್: ₹102.53

ಅರಮನೆ ನಗರಿ ಮೈಸೂರು
ಪೆಟ್ರೋಲ್: ₹111.92, ಡೀಸೆಲ್: ₹102.89

ದೇಶದಲ್ಲಿ ನಿರಂತರವಾಗಿ ಹೆಚ್ಚಳ ಕಾಣುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸದ್ಯಕ್ಕೆ ಇಳಿಯುವ ಲಕ್ಷಣಗಳಿಲ್ಲ. ಪೂರೈಕೆ ಹಾಗೂ ಬೇಡಿಕೆಗೆ ಸಂಬಂಧಿಸಿದ ಸಮಸ್ಯೆಗಳ ವಿಚಾರದಲ್ಲಿ ವಿವಿಧ ತೈಲ ರಫ್ತು ದೇಶಗಳೊಂದಿಗೆ ಭಾರತ ಸರ್ಕಾರ ಮಾತುಕತೆ ನಡೆಸುತ್ತಿದೆ. ಆದರೆ ದರದಲ್ಲಿ ಇಳಿಕೆಯ ಸಾಧ್ಯತೆ ಇಲ್ಲ. ಕಚ್ಚಾ ತೈಲದ ಬೆಲೆ ಕಡಿಮೆ ಇದ್ದಾಗಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೆರಿಗೆ ಕಡಿತದ ಔದಾರ್ಯ ಪ್ರದರ್ಶಿಸಿರಲಿಲ್ಲ. ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 32.9 ರೂ ಹಾಗೂ ಡೀಸೆಲ್ ಮೇಲೆ 31.8 ರೂ ಅಬಕಾರಿ ಸುಂಕ ವಿಧಿಸಲಾಗುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರಗಳು ರಾಜ್ಯಗಳ ಸುಂಕ ಹಾಗೂ ತೆರಿಗೆಗಳ ಮೇಲೆ ಅವಲಂಬಿತವಾಗಿರುತ್ತದೆ. ಹೀಗಾಗಿ ಪ್ರದೇಶದಿಂದ ಪ್ರದೇಶಕ್ಕೆ ತೈಲ ದರದಲ್ಲಿ ಬದಲಾವಣೆ ಇರುತ್ತದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *