ಗಾಯಕ ಎಸ್.ಪಿ ಬಾಲಸುಬ್ರಮಣ್ಯಂ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ
ಕಳೆದ ವಾರವಷ್ಟೇ ಕರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ (74) ಆರೋಗ್ಯ ಸ್ಥಿತಿ ಗಂಭೀರವಾಗಿದೆಯೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಚೆನ್ನೈನ ಎಂಜಿಎಂ ಹೆಲ್ತ್ಕೇರ್ನಲ್ಲಿ ಆಗಸ್ಟ್ 5ರಂದು ಕರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಎಸ್ಪಿಬಿ ಅವರನ್ನು ದಾಖಲಿಸಲಾಗಿತ್ತು. ಅಂದಿನಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆಸ್ಪತ್ರೆ, ಎಸ್ಪಿಬಿ ಅವರ ಆರೋಗ್ಯದ ಸ್ಥಿತಿ ಬಗ್ಗೆ ತಿಳಿಸಿದೆ.
ಆಗಸ್ಟ್ 13ರಿಂದ ಎಸ್ಪಿಬಿ ಅವರ ಸ್ಥಿತಿ ತೀರಾ ಹದಗೆಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಈಗಾಗಲೇ ನುರಿತ ವೈದ್ಯರನ್ನೂ ಕರೆಸಲಾಗಿದೆ. ಸದ್ಯ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ.
ಆಗಸ್ಟ್ 5ರಂದು ಕರೊನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್ಪಿಬಿ, ಶೀಘ್ರದಲ್ಲಿ ಗುಣಮುಖನಾಗಿ ಆಚೆ ಬರುವೆ ಎಂದು ಹೇಳಿಕೊಂಡಿದ್ದರು. (ಏಜೆನ್ಸೀಸ್)