ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಾಕ್ಷರತಾ ಕಾರ್ಯಕ್ರಮ ಹಾಗೂ ಖಾಯಂ ಕಲಿಕಾ ಕೇಂದ್ರಗಳ ಉದ್ಘಾಟನೆ

ಕಲಬುರಗಿ : ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಕಾರಾಗೃಹ ಮತ್ತು ಸುಧಾರಣೆ ಸೇವೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಲೋಕ ಶಿಕ್ಷಣ ಸಮಿತಿ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ದಿನದಂದು ಕೇಂದ್ರ ಕಾರಾಗೃಹದಲ್ಲಿ ಕೇಂದ್ರ ಕಾರಾಗೃಹದಲ್ಲಿನ ಕಾರಾಗೃಹ ನಿವಾಸಿಗಳಿಗೆ ಏರ್ಪಡಿಸಲಾಗಿದ್ದ ಸಾಕ್ಷರತಾ ಕಾರ್ಯಕ್ರಮ ಹಾಗೂ ಖಾಯಂ ಕಲಿಕಾ ಕೇಂದ್ರಗಳನ್ನು ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಕೆ.ಸುಬ್ರಮಣ್ಯ ಅವರು ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಶಿಕ್ಷಣ ವಂಚಿತ ಅನಕ್ಷರಸ್ಥರು ವಯಸ್ಕರ ಶಿಕ್ಷಣ ಪಡೆದು ಶಿಕ್ಷಿತರಾಗಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ಮಾತನಾಡಿ, ಸಾಕ್ಷರತಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ ವತಿಯಿಂದ ಎಲ್ಲಾ ಸೌಲಭ್ಯ ನೀಡಲಾಗುವುದು. ಇದಲ್ಲದೇ ಕೇಂದ್ರ ಕಾರಾಗೃಹದಲ್ಲಿ ಸಸ್ಯತೋಟ ಮತ್ತು ಎರೆ ಹುಳು ಗೊಬ್ಬರ ತಯಾರಿಕೆ ಘಟಕ ಸ್ಥಾಪಿಸಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ ಮಾತನಾಡಿ ನಮ್ಮ ರಾಜ್ಯ ಭಾಷೆ ಕನ್ನಡವನ್ನು ಎಲ್ಲರೂ ಕಲಿಯಬೇಕು ಮತ್ತು ಎಲ್ಲರಿಗೂ ಈ ಭಾಷೆಯನ್ನು ಓದಲು ಬರಬೇಕು. ಕಾರಾಗೃಹದ ನಿವಾಸಿಗಳು ಈ ಪಡನಾ ಲಿಖನಾ ಸಾಕ್ಷರತಾ ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದರು.
ಇದೇ ಸಂದರ್ಭದಲ್ಲಿ ಕೇಂದ್ರ ಕಾರಾಗೃಹ ನಿವಾಸಿಗಳಲ್ಲಿ 180 ಜನ ಪುರುಷ, 20 ಜನ ಮಹಿಳೆ ಅನಕ್ಷರಸ್ಥರು ಹಾಗೂ ಅರೆ-ಅಕ್ಷರಸ್ಥ ಕಲಿಕಾರ್ಥಿಗಳನ್ನು ಗುರುತಿಸಿ “ಕಲಿಕೆಯಿಂದ ಬದಲಾವಣೆ” ಸಾಕ್ಷರತಾ ಕಾರ್ಯಕ್ರಮದಡಿ 10 ಜನ ಸ್ವಯಂ ಸೇವಕ ಬೋಧಕರಿಗೆ ಬೋಧನಾ ಸಾಮಗ್ರಿಗಳ ಕಿಟ್‍ಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಡಿ.ಸಿ.ಪಿ ಅಡ್ಡೂರು ಶ್ರೀನಿವಾಸಲು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುಶಾಂತ ಎಮ್ ಚೌಗಲೆ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಹಣಮಂತಪ್ಪಾ ಎಸ್. ನಾಟೀಕಾರ ಜಿ ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ ತಾಲೂಕ ಸಂಯೋಜಕರಾದ ಮುರುಗೇಂದ್ರ ಮಸಳಿ, ಮಲ್ಲಯ್ಯ ಹಿರೇಮಠ, ಸುರೇಶ ಜಾಧವ, ಸಾಕ್ಷರತಾ ಶಿಕ್ಷಣ ಪ್ರೇಮಿ ಬಂಡಯ್ಯ ಪಿ. ಹಿರೇಮಠ ಅವರು ಸಾಕ್ಷರಗೀತೆ ಹಾಡಿದರು.
ಶಿವಾನಂದ ಚವ್ಹಾಣ ಪ್ರಸ್ತಾವಿಕವಾಗಿ ಮಾತನಾಡಿದರು. ಕೇಂದ್ರ ಕಾರಾಗೃಹದ ಪ್ರಭಾರಿ ಅಧೀಕ್ಷಕ ವಿ.ಕೃಷ್ಣಮೂರ್ತಿ ಸ್ವಾಗತಿಸಿದರು. ಕೇಂದ್ರ ಕಾರಾಗೃಹದ ಶಿಕ್ಷಕ ನಾಗರಾಜ ಮೂಲಗೆ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಸಂಯೋಜಕ ಪ್ರಭು ಜಾಧವ ವಂದಿಸಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *