ಕಣ್ಣಿಲ್ಲದವರಿಗೆ ನೇತ್ರದಾನ ಮಾಡಿ: ಸಚಿವ ಸುಧಾಕರ್‌

ಬೆಂಗಳೂರು(ನ.10):  ಮರಣ ಹೊಂದಿದ ನಂತರ ಕಣ್ಣಿಲ್ಲದ ನಾಲ್ಕು ಜನರು ಜಗತ್ತು ನೋಡಲು ನೇತ್ರದಾನದ(Eye Donation) ಬಗ್ಗೆ ವ್ಯಾಪಕ ಪ್ರಮಾಣದಲ್ಲಿ ಅರಿವು ಮೂಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್‌(Dr K Sudhakar) ಹೇಳಿದರು.

ಮಿಂಟೋ ಕಣ್ಣಾಸ್ಪತ್ರೆಯ(Minto Hospital) 125ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಮಾತನಾಡಿದ ಸಚಿವರು, ಇತ್ತೀಚೆಗೆ ನಿಧನರಾದ ನಟ ಪುನೀತ್‌ ರಾಜ್‌ಕುಮಾರ್‌(Puneeth Rajkumar) ನೇತ್ರದಾನ ಮಾಡಿ ನಾಲ್ಕು ಜನರಿಗೆ ದೃಷ್ಟಿನೀಡಿದ್ದಾರೆ. ತಂತ್ರಜ್ಞಾನ ಬೆಳೆದಿರುವುದರಿಂದ ಒಬ್ಬರು ನಾಲ್ಕು ಜನರಿಗೆ ದೃಷ್ಟಿನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದ ಡಾ. ಕೆ.ಸುಧಾಕರ್‌

Awareness on Eye Donation to the People Says Dr K Sudhakar grg

ದೇಶದಲ್ಲಿ(India) 3-4 ಕೋಟಿ ಜನರಿಗೆ ಅಂಧತ್ವ(Blindness) ಇದೆ. ಆದ್ದರಿಂದ ನೇತ್ರ ದಾನಿಗಳ ಸಂಖ್ಯೆ ಹೆಚ್ಚಬೇಕಿದೆ. ಮರಣ(Death) ಹೊಂದಿದ ನಂತರವೂ ನಾಲ್ಕು ಜನರಿಗೆ ದೃಷ್ಟಿನೀಡಿ ಅವರಿಗೆ ಜಗತ್ತು ನೋಡಲು ಅವಕಾಶ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕೂಡ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ತಾವು ಕೂಡ ಕಳೆದ ವರ್ಷ ನೇತ್ರದಾನ ಮಾಡಲು ಪ್ರತಿಜ್ಞೆ ಮಾಡಿದ್ದೇನೆ. ಇದನ್ನು ಆಂದೋಲನದಂತೆ ನಡೆಸಿ ನೇತ್ರದಾನದ ಬಗ್ಗೆ ಅರಿವು ಮೂಡಿಸಬೇಕು ಎಂದು ಸಚಿವರು ಕರೆ ನೀಡಿದರು.

Awareness on Eye Donation to the People Says Dr K Sudhakar grg

ಕೋವಿಡ್‌(Covid19) ಸಮಯದಲ್ಲಿ ಮಿಂಟೋ, ವಿಕ್ಟೋರಿಯಾ ಆಸ್ಪತ್ರೆಯನ್ನು ಕೋವಿಡ್‌ ಚಿಕಿತ್ಸೆಗೆ ಮೀಸಲಿಡಲಾಗಿತ್ತು. ಆದರೆ ಈಗ ಎಲ್ಲ ಬಗೆಯ ಚಿಕಿತ್ಸೆ ನೀಡಲಾಗುತ್ತಿದೆ. ಜನರು ಧೈರ್ಯವಾಗಿ ಬಂದು ಇತರೆ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಬಹುದು ಎಂದು ಡಾ. ಸುಧಾಕರ್‌ ತಿಳಿಸಿದರು.

Awareness on Eye Donation to the People Says Dr K Sudhakar grg

1896ರಲ್ಲಿ ಡಿಸ್ಪೆನ್ಸರಿಯಾಗಿ ಆರಂಭವಾದ ಸಂಸ್ಥೆ 125 ವರ್ಷದವರೆಗೂ ಸೇವೆ ನೀಡಿದೆ. ಪ್ಲೇಗ್‌ನಿಂದ ಆರಂಭವಾಗಿ ಇತ್ತೀಚೆಗೆ ಕೋವಿಡ್‌ ತಡೆಗಟ್ಟುವವರೆಗೂ ಈ ಸಂಸ್ಥೆ ಕಾರ್ಯನಿರ್ವಹಿಸಿದೆ. 125ನೇ ವರ್ಷಾಚರಣೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳನ್ನು ಆಹ್ವಾನಿಸುವ ಉದ್ದೇಶಿಸಲಾಗಿತ್ತು. ಆದರೆ ಕೋವಿಡ್‌ ಕಾರಣದಿಂದಾಗಿ ಸರಳವಾಗಿ ಆಚರಣೆ ಮಾಡುತ್ತಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷವಾಗಿದೆ. ಜಗತ್ತಿನ ಅನೇಕ ದೇಶಗಳು 100 ವರ್ಷವನ್ನೇ ಪೂರೈಸಿಲ್ಲ. ಅಂತಹದ್ದರಲ್ಲಿ ಮಿಂಟೋ ಸಂಸ್ಥೆ 125 ವರ್ಷ ಪೂರೈಸಿರುವುದು ಕನ್ನಡಿಗರಿಗೆ(Kannadigas) ಹೆಮ್ಮೆ ತರುವ ವಿಷಯ ಎಂದು ಹೇಳಿದರು. ಶಾಸಕ ಜಮೀರ್‌ ಅಹ್ಮದ್‌ಖಾನ್‌, ಮಿಂಟೋ ಆಸ್ಪತ್ರೆಯ ನಿರ್ದೇಶಕಿ ಡಾ. ಸುಜಾತಾ ರಾಥೋಡ್‌, ಬೆಂಗಳೂರು ಮೆಡಿಕಲ್‌ ಕಾಲೇಜಿನ ಡೀನ್‌ ಡಾ. ಜಯಂತಿ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Awareness on Eye Donation to the People Says Dr K Sudhakar grg

ಮಿಂಟೋ ಆಸ್ಪತ್ರೆ 125 ವರ್ಷಗಳ ನೆನಪಿನಾರ್ಥ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ 125 ಸಸಿಗಳನ್ನು ನೆಡುವ ಮೂಲಕ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತ. ಭಾನುವಾರವೇ ಮಿಂಟೋ ಆಸ್ಪತ್ರೆಯ ಕಟ್ಟಡವನ್ನು ವಿದ್ಯುತ್‌ ದೀಪಗಳಿಂದ ಅಲಂಕಾರಿಸಲಾಗಿದೆ. ಸಚಿವ ಡಾ ಕೆ.ಸುಧಾಕರ್‌, ಶಾಸಕ ಜಮೀರ್‌, ಇನ್ನಿತರ ಗಣ್ಯರ ಉಪಸ್ಥಿತಿಯಲ್ಲಿ ಸಸಿಗಳನ್ನು ನೆಡಲಾಯಿತು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *