Petrol Price Today: ಸತತ ಆರು ದಿನಗಳಿಂದ ಸ್ಥಿರತೆಯನ್ನು ಕಾಯ್ದುಕೊಂಡ ಪೆಟ್ರೋಲ್​, ಡೀಸೆಲ್​ ದರ!

Petrol Diesel Price Today | ದೆಹಲಿ: ಸತತ ಆರು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ ಇಂದು ಬುಧವಾರ (ನವೆಂಬರ್ 10) ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ಸ್ಥಿರತೆ ಕಾಯ್ದುಕೊಂಡಿದೆ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂದು ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳಾಗಿಲ್ಲ. ಇಂದು ಲೀಟರ್ ಪೆಟ್ರೋಲ್ ಬೆಲೆ ಮತ್ತು ಡೀಸೆಲ್ ಬೆಲೆ ಎಷ್ಟಿದೆ? ಈ ಕುರಿತಾದ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ನಿಗದಿಯಾಗಿದೆ. ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ನಿಗದಿಯಾಗಿದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬಲೆ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.10 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *