ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಯಶಸ್ವಿ: ಕೇಂದ್ರದಿಂದ ರಾಜ್ಯಕ್ಕೆ ಬಂಪರ್​ ನೆರವು

ಬೆಂಗಳೂರು: ದೆಹಲಿ ಪ್ರವಾಸ ಯಶಸ್ವಿಯಾಗಿದೆ. ಈ ದೆಹಲಿ ಪ್ರವಾಸ ಎರಡು ದೃಷ್ಟಿಯಿಂದ ರಾಜ್ಯಕ್ಕೆ ನೆರವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

ಆರ್.ಟಿ.ನಗರ ನಿವಾಸದಲ್ಲಿ ಮಾತನಾಡಿದ ಅವರು,  ಒಂದು ನಮ್ಮ ರಾಜ್ಯಕ್ಕೆ ಬೇಕಾಗಿರುವ ಕಲ್ಲಿದ್ದಲು ಒಡಿಶಾದಲ್ಲಿ ಉಪಯೋಗಿಸಲು ಅವಕಾಶ ಸಿಕ್ಕಿದೆ. ಬರುವ ದಿನಗಳಲ್ಲಿ ರಾಜ್ಯದಲ್ಲಿ ಕಲ್ಲಿದ್ದಲು ಸಮಸ್ಯೆ ಆಗಲ್ಲ ಎನ್ನುವ ನಂಬಿಕೆ ಇದೆ. ಇನ್ನೊಂದು ಆಹಾರ ನಾಗರೀಕ ಪೂರೈಕೆ ಇಲಾಖೆಗೆ ಸಂಬಂಧಿಸಿದಂತೆ ತುಂಬಾ ಬೇಡಿಕೆಗಳಿತ್ತು. ಸುಮಾರು 2100 ಕೋಟಿ ಅನುದಾನ ಬಿಡುಗಡೆ ಆಗಬೇಕಿತ್ತು. ಕೇಂದ್ರ ಆಹಾರ ಸಚಿವ ಪಿಯೋಶ್ ಗೋಯಲ್ ಅವರು ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ ಎಂದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿಶ್ ಶಾ ಅವರನ್ನು ಭೇಟಿ ಮಾಡಿದೆ. ನಾವು 100 ದಿನಗಳಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಿಪಡಿಸಿ, ಯೋಜನೆಗಳ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ. ಒಟ್ಟಾರೆ ದೆಹಲಿ ಪ್ರವಾಸ ಬಹಳ ಯಶಸ್ವಿಯಾಗಿದೆ ಎಂದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *