ಜೆಡಿಎಸ್ ಶಾಸಕರ ಬ್ರೈನ್ ವಾಶ್ ಮಾಡಲು ಸಿದ್ದರಾಮಯ್ಯ ಪ್ರಯತ್ನ: ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ನಾಯಕರನ್ನು ಸಾಕಷ್ಟು ಬಾರಿ ಸಂಪರ್ಕಿಸಿದ್ದು, ಅವರ ಬ್ರೈನ್ ವಾಶ್ ಮಾಡಿ ಹೈಜಾಕ್ ಮಾಡಲು ಪ್ರಯತ್ನಿಸುತ್ತಿದ್ದಾರೆಂದು ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಗುರುವಾರ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ನಿನ್ನೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಹೆಸರೇಳದೆಯೇ ಅವರ ವಿರುದ್ಧ ಗುಡುಗಿದರು.
ಜೆಡಿಎಸ್ಗೆ ಭವಿಷ್ಯ ಇಲ್ಲ ಎಂದು ಹೇಳುತ್ತಿದ್ದಾರೆ. ಸಿಎಂ ಆಗಿದ್ದವರು, ಸಿಎಂ ಆಗಬೇಕೆನ್ನುವವರು ಅವರು. ಜೆಡಿಎಸ್ ಶಾಸಕರಿಗೆ ಬ್ರೈನ್ ವಾಶ್ ಮಾಡುತ್ತಿದ್ದಾರೆ. ಅವರು ದಯನೇಸಿ ಪರಿಸ್ಥಿತಿ ತಲುಪಿದ್ದಾರೆ, ಜೆಡಿಎಸ್ ಮುಗಿಸಬೇಕೆನ್ನುವ ಹುನ್ನಾರ ಅವರದ್ದು ಎಂದರು.