Farm Laws: ಪ್ರಧಾನಿ ಮೋದಿ ಮಹತ್ವದ ಘೋಷಣೆ: ಮೂರು ಕೃಷಿ ಕಾಯ್ದೆಗಳು ರದ್ದು

ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ವಿವಾದಾತ್ಮಕ ಮೂರು ಕೃಷ್ಟಿ ಕಾಯ್ದೆ(Farm Laws) ಕಾರಣವಾಗಿತ್ತು. ಇದೀಗ ಆ ಮೂರು ಕೃಷ್ಟಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದು ಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ(Modi) ಅವರು ಈ ಮೂರು ಕಾಯ್ದೆಗಳನ್ನು ರದ್ದು(Cancel)ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಗುರು ಪೂರಬ್(Guru Purab) ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ಮಹತ್ವದ ಘೋಷಣೆ ಮಾಡಿದ್ದಾರೆ. ರೈತರು(Farmers) ತಮ್ಮ ಪ್ರತಿಭಟನೆ(Protest)ಯನ್ನು ವಾಪಾಸು ಪಡೆದು ತಮ್ಮ ಹೊಲಗಳಿಗೆ ಹಿಂತಿರುಗಿ ಕೃಷಿ ಚಟುವಟಿಕೆಯಲ್ಲಿ ತೊಡಗುವಂತೆ ಈ ವೇಳೆ ಮನವಿ ಮಾಡಿದ್ದಾರೆ. ಕೃಷಿ ಕಾನೂನುಗಳ ಬಗ್ಗೆ ರೈತರ ಒಂದು ವರ್ಗವನ್ನು ಮನವರಿಕೆ ಮಾಡಲು ಸರ್ಕಾರ ವಿಫಲವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.  ‘ನಿಜವಾದ ಮತ್ತು ಶುದ್ಧ ಹೃದಯದಿಂದ ನಾನು ಭಾರತಕ್ಕೆ ಕ್ಷಮೆಯಾಚಿಸುತ್ತೇನೆ’ ರೈತರಿಗೆ ಕೃಷಿ ಕಾನೂನುಗಳ ಬಗ್ಗೆ ಮನವರಿಕೆ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಹೀಗಾಗಿ ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಈ ತಿಂಗಳು ಪ್ರಾರಂಭವಾಗುವ ಸಂಸತ್ತಿನ ಅಧಿವೇಶನದಲ್ಲಿ ನಾವು ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸುತ್ತೇವೆ” ಹೇಳಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *