Morning Digest: ಇಂದು ಬೆಂಗಳೂರಿನಲ್ಲಿ ಮಳೆ, ಸರ್ಕಾರದಿಂದ ಹೊಸ ಮಾರ್ಗಸೂಚಿ, ಚಿನ್ನದ ಬೆಲೆ ಏರಿಕೆ; ಬೆಳಗಿನ ಟಾಪ್ ನ್ಯೂಸ್ಗಳು
1. Karnataka Weather Report: ಇಂದು ಬೆಂಗಳೂರಿನಲ್ಲಿ ಮಳೆ ಸಾಧ್ಯತೆ: ಜಿಲ್ಲಾವಾರು ಹವಾಮಾನ ವರದಿ ಇಲ್ಲಿದೆ
Karnataka Weather Today: ಇಂದು ಬೆಂಗಳೂರು (Bengaluru) ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾ (IMD)ಖೆ ಮುನ್ಸೂಚನೆ ನೀಡಿದಎ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ (Cloudy Weather) ಇರಲಿದೆ. ವೀಕೆಂಡ್ ಅಂತ ಹೊರಗೆ ತೆರಳುವ ಮುನ್ನ ಒಮ್ಮೆ ಯೋಚಿಸಿ. ಇಲ್ಲವಾದ್ರೆ ಮಳೆಯಲ್ಲಿ (Rainfall) ಸಿಲುಕಿಕೊಳ್ಳುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ (North Karnataka) ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ, ಸಾಧಾರಣ ಚಳಿ ಮತ್ತು ಬೆಳಗಿನ ಜಾವ ದಟ್ಟವಾದ ಮಂಜು ಆವರಿಸಿರಲಿದೆ. ಆಂಧ್ರಪ್ರದೇಶ (Andhra Pradesh) ಮತ್ತು ತಮಿಳುನಾಡಿನಲ್ಲಿ (Tamil nadu) ಪ್ರತ್ಯೇಕ ಗುಡುಗು ಸಹಿತ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಈಶಾನ್ಯ ಪ್ರದೇಶ, ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನವನ್ನು ಮುನ್ಸೂಚಿಸಲಾಗಿದೆ. ಈಶಾನ್ಯ ಪ್ರದೇಶದ ಹಲವು ಕಡೆ ಬೆಳಗಿನ ವೇಳೆಯಲ್ಲಿ ಮಧ್ಯಮ ಮಂಜಿನ ಸಾಧ್ಯತೆ ಇರುತ್ತದೆ.
2. Omicron: ಓಮೈಕ್ರಾನ್ ಸೋಂಕಿತರ ಡಿಸ್ಚಾರ್ಜ್ ಬಗ್ಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ
ಬೆಂಗಳೂರು(ಡಿ.11): ಕೊರೋನಾ(Corona) ಹೊಸ ರೂಪಾಂತರ ಓಮೈಕ್ರಾನ್(Omicron) ದಿನದಿಂದ ದಿನಕ್ಕೆ ಜನರಲ್ಲಿ ಆತಂಕ ಹೆಚ್ಚಿಸುತ್ತಿದೆ. ದೇಶದ ಮೊದಲ ಓಮೈಕ್ರಾನ್ ಪ್ರಕರಣ ಬೆಂಗಳೂರಿ(Bengaluru)ನಲ್ಲಿ ಪತ್ತೆಯಾಗಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 32 ಮಂದಿಗೆ ಓಮೈಕ್ರಾನ್(Omicron) ವಕ್ಕರಿಸಿದೆ. ಈ ಓಮೈಕ್ರಾನ್ ನಿಯಂತ್ರಣಕ್ಕೆ ಸರ್ಕಾರವು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಓಮೈಕ್ರಾನ್ ತಗುಲಿರುವ ಅನೇಕ ಮಂದಿಗೆ ಸೌಮ್ಯ ಲಕ್ಷಣಗಳು(Mild Symptoms) ಕಾಣಿಸಿಕೊಂಡರೆ, ಇನ್ನೂ ಹಲವರಿಗೆ ರೋಗ ಲಕ್ಷಣಗಳೇ ಕಂಡುಬಂದಿಲ್ಲ. ಈ ನಡುವೆ ಓಮೈಕ್ರಾನ್ ಸೋಂಕಿತರ ಡಿಸ್ಚಾರ್ಜ್(Discharge) ಬಗ್ಗೆ ಕರ್ನಾಟಕ ಸರ್ಕಾರ ಮಾರ್ಗಸೂಚಿಯ(Guidelines)ನ್ನು ಪ್ರಕಟ ಮಾಡಿದೆ.
3.ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಆರೋಪಿ ಲೋಹಿತ್ ಕಾಲಿಗೆ ಗುಂಡೇಟು
ಮಾಜಿ ಸಚಿವ ವರ್ತೂರು ಪ್ರಕಾಶ್ (Varthur Prakash Kidnap Case) ಅಪಹರಣದ ಪ್ರಮುಖ ಆರೋಪಿ (Accused) ಕಾಲಿಗೆ ಗುಂಡೇಟು ಹೊಡೆದು ಪೊಲೀಸರು (Bengaluru Police) ಬಂಧಿಸಿದ್ದಾರೆ. ಇಂದು ಬೆಳಗ್ಗೆ ಇಂದಿರಾ ನಗರ ಠಾಣೆಯ (Indira nagara police station) ಪೊಲೀಸರ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯ ಬಂಧನವಾಗಿದೆ. ಸದ್ಯ ಆರೋಪಿಯನ್ನು ಆಸ್ಪತ್ರೆಗ ರವಾನಿಸಲಾಗಿದೆ. ಲೋಹಿತ್ ಅಲಿಯಾಸ್ ರೋಹಿತ್ ಮೇಲೆ ಬಂಧಿತ ಆರೋಪಿ. ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಅವರು ರೌಡಿ ಬಲಗಾಲಿಗೆ ಗುಂಡೇಟು ಬಂಧಿಸಿದ್ದಾರೆ. ಇಂದಿರಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ, ಅಪಹರಣ ಸೇರಿ ಇತರೆ 17 ಪ್ರಕರಣಗಳಲ್ಲಿ ಆರೋಪಿ ಲೋಹಿತ್ ಪೊಲೀಸರಿಗೆ ಬೇಕಾಗಿದ್ದನು.
4.Petrol And Diesel Price Today: ನಿಮ್ಮ ನಗರದಲ್ಲಿನ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಎಲ್ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡಿಲ್ಲ. ಉಳಿದ ಹಲವು ಜಿಲ್ಲೆಗಳಲ್ಲಿ ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂದು 1 ಲೀಟರ್ ಪೆಟ್ರೋಲ್ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ಕುರಿತ ವಿವರ ಇಲ್ಲಿದೆ.
5.Gold Price Today: ಚಿನ್ನ ಏರಿಕೆ, ಬೆಳ್ಳಿ ಇಳಿಕೆ : ಇಲ್ಲಿದೆ ಇವತ್ತಿನ ದರ
Gold Price Today, December 11, 2021: ನೀವು ಚಿನ್ನ ಖರೀದಿಗೆ ಹೋಗುತ್ತಿದ್ರೆ ಇವತ್ತಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಇದರಿಂದ ಚಿನ್ನ (Gold) ಖರೀದಿ ಸುಲಭವಾಗಲಿದೆ. ಕಳೆದೊಂದು ವಾರದಿಂದ ಚಿನ್ನದ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,960 ರೂ.ಗಳಾಗಿದ್ದು, 10 ರೂಪಾಯಿ ಏರಿಕೆ ಕಂಡಿದೆ. ಇನ್ನು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 49,030 ರೂ.ಗಳಷ್ಟಿದ್ದು, 10 ರೂ. ಇಳಿಕೆಯಾಗಿದೆ. ಇನ್ನು 10 ಗ್ರಾಂ ಬೆಳ್ಳಿ (Silver Price) ಬೆಲೆ 607 ರೂ.ಇದೆ.