Covid-19: ಕರೋನಾ ಪಾಸಿಟಿವ್ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ನಂತರ ಪರೀಕ್ಷೆ ಅಗತ್ಯವಿದೆಯೇ ಅಥವಾ ಇಲ್ಲವೇ? ಸತ್ಯೇಂದ್ರ ಜೈನ್ ಹೇಳಿದ್ದೇನು ಗೊತ್ತಾ
Covid-19: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕರೋನಾವೈರಸ್ (Coronavirus) ಮತ್ತೆ ವೇಗವಾಗಿ ಹೆಚ್ಚಾಗುತ್ತಿದೆ. ಏತನ್ಮಧ್ಯೆ, ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ (Satyendra Jain) ಜನರಿಗೆ ಪರಿಹಾರ ನೀಡುವ ಮಾಹಿತಿಯೊಂದನ್ನು ಹಂಚಿಕೊಂಡಿದ್ದು, ಕರೋನಾ ಪಾಸಿಟಿವ್ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ನಂತರ ಯಾವುದೇ ರೋಗಲಕ್ಷಣಗಳಿಲ್ಲದಿದ್ದರೆ, ನಂತರ ಕೋವಿಡ್-19 ಪರೀಕ್ಷೆಯನ್ನು ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.
ರೋಗಲಕ್ಷಣಗಳು ಕಾಣಿಸಿಕೊಂಡ ನಂತರವೇ ಪರೀಕ್ಷೆಯನ್ನು ಮಾಡಿ:
ಯಾವುದೇ ಒಬ್ಬ ವ್ಯಕ್ತಿಯು ಕರೋನಾ ಪಾಸಿಟಿವ್ (Corona Positive) ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದರೂ ಸಹ ಯಾವುದೇ ರೋಗಲಕ್ಷಣಗಳಿಲ್ಲದಿದ್ದರೆ, ಅವರನ್ನು ಪರೀಕ್ಷಿಸುವ ಅಗತ್ಯವಿಲ್ಲ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ, ರೋಗಲಕ್ಷಣಗಳು ಕಾಣಿಸಿಕೊಂಡ ನಂತರವೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಜನರಿಗೆ ಸಲಹೆ ನೀಡಿದ್ದಾರೆ.