Covid 19 Increase: ಇಂದು ಪರಿಶೀಲನಾ ಸಭೆ ಕರೆದ ಪ್ರಧಾನ ಮಂತ್ರಿ ಮೋದಿ

ನವದೆಹಲಿ: ಕೋವಿಡ್ ‌-19  (Covid-19) ಮತ್ತು ಓಮೈಕ್ರಾನ್ (Omicron Variant) ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಈ ಸೋಂಕು ಇನ್ನಷ್ಟು ತೀವ್ರವಾಗಿ ಹರಡಲಿದೆ ಎಂಬ ಮಾತುಗಳು ಕೂಡ ಆರೋಗ್ಯ ಕ್ಷೇತ್ರದ ತಜ್ಞರಿಂದ (Health Experts) ಕೇಳಿಬರುತ್ತಿದೆ. ಕೊರೋನಾ ಮೂರನೇ ಅಲೆ (Corona Third Wave) ತೀವ್ರವಾಗಿ ಅಪ್ಪಳಿಸಿ ಅಪಾರ ಪ್ರಮಾಣದ ದುಷ್ಪರಿಣಾಮ ಬೀರಲಿದೆ ಎಂಬ ಭಯ ಕೂಡ ಸೃಷ್ಟಿಯಾಗಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi) ಇಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸ್ (Video Conference) ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆದಿರುವ ಈ ಮಹತ್ವದ ಸಭೆಯಲ್ಲಿ ಪ್ರಧಾನಿ ಕಚೇರಿ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಗೃಹ ಸಚಿವಾಲಯದ ಅಧಿಕಾರಿಗಳು, ನೀತಿ ಆಯೋಗದ ಆರೋಗ್ಯ ವಿಭಾಗದ ಅಧಿಕಾರಿಗಳು ಭಾಗಿ ಆಗಲಿದ್ದಾರೆ‌. ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಭಾಯ್ ಮಾಂಡೋವಿಯಾ (Mansukh Mandaviya) ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಮಗ್ರ ಸಮಾಲೋಚನೆಗಾಗಿ ಸಭೆ

ದೇಶದಲ್ಲಿ ಈಗ ಕೊರೋನಾ ಸೋಂಕು ಹರಡುವಿಕೆ ದಿಢೀರನೆ ಹೆಚ್ಚಾಗಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಕೊರೋನಾ ಸೋಂಕು ಯಾವ್ಯಾವ ರಾಜ್ಯಗಳಲ್ಲಿ ಯಾವ ಪ್ರಮಾಣದಲ್ಲಿದೆ? ಸೋಂಕು ತಡೆಯಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಏನೇನು ಕ್ರಮಗಳನ್ನು ಕೈಗೊಳ್ಳಲಾಗಿದೆ ದಿನದ ಮತ್ತು ವಾರದ ಪಾಸಿಟಿವ್ ರೇಟ್ ಹೇಗಿದೆ? ಸೋಂಕಿನಿಂದ ಸಾಯುವವತ ಪ್ರಮಾಣ ಹೇಗಿದೆ? ಕೊರೋನಾ ಅಲ್ಲದೆ ಓಮೈಕ್ರಾನ್ ಸೋಂಕು ಹರಡುವಿಕೆ ಪ್ರಮಾಣ ಹೇಗಿದೆ? ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹರಡುವಿಕೆ ತಡೆಯಲು ಮುಂದೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಯಾವುವು ಎಂಬ ವಿಷಯಗಳ ಬಗ್ಗೆ ಸಮಗ್ರವಾದ ಸಮಾಲೋಚನೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಬೂಸ್ಟರ್ ಡೋಸ್ ಬಗ್ಗೆ ಚರ್ಚೆ

ಕೋವಿಡ್ ‌-19 ಮತ್ತು ಓಮೈಕ್ರಾನ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಬೂಸ್ಟರ್ ಡೋಸ್ ನೀಡುವಿಕೆ ಸಹಕಾರಿ ಆಗುವುದೇ? ಬೂಸ್ಟರ್ ಡೋಸ್ ನೀಡಬೇಕಾದರೆ ಅದಕ್ಕೆ ಅನುಸರಿಸಬೇಕಾದ ಮಾರ್ಗಸೂಚಿ ಹೇಗಿರಬೇಕು? ಅಲ್ಲದೆ ದೇಶದಲ್ಲೆಡೆ ಇನ್ನೂ ಕೂಡ ಸರಿಯಾಗಿ ಕೊರೋನಾ ಲಸಿಕೆ ಹಾಕಿಲ್ಲದಿರುವ ಕಾರಣದಿಂದ ‘ಶೇಕಡಾ ‌ನೂರರಷ್ಟು ವ್ಯಾಕ್ಸಿನೇಷನ್‌’ ಮಾಡುವುದು ಹೇಗೆ ಎಂಬ ಬಗ್ಗೆ ಕೂಡ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

3ನೇ ಅಲೆ ಎದುರಿಸಲು ಸಿದ್ಧರಾಗಿ

ಭಾರತದಲ್ಲಿ ಈಗಾಗಲೇ ಓಮೈಕ್ರಾನ್‌ ಪ್ರಕರಣಗಳ ಉಲ್ಬಣ ಪ್ರಾರಂಭವಾಗಿದೆ ಮತ್ತು ಕೆಲವು ಮಹಾ ನಗರಗಳಲ್ಲಿ ಇದು ವೇಗವಾಗಿ ಹರಡುತ್ತಿದೆ ಮತ್ತು ಬಹಳಷ್ಟು ಜನರಿಗೆ ಸೋಂಕು ಉಂಟು ಮಾಡುವ ಸಾಧ್ಯತೆ ಹೆಚ್ಚಾಗಿದೆ ಭಾರತೀಯರು ಕೊರೋನಾ ಮೂರನೇ ಅಲೆ ಎದುರಿಸಲು ಸಿದ್ಧರಾಗಿರಬೇಕು. ಆದರೆ ಭಯಭೀತರಾಗಿರಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ (World Health Organization) ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ (Soumya Swaminathan) ಹೇಳಿದ್ದಾರೆ. ಅಲ್ಲದೆ ಕೋವಿಡ್ ವಿರುದ್ಧ ಸ್ವಯಂ ಔಷಧೋಪಚಾರ ತೆಗೆದುಕೊಳ್ಳುವುದರ ವಿರುದ್ಧ ಎಚ್ಚರಿಸಿದ್ದಾರೆ.

“ಸ್ವಯಂ ಔಷಧೋಪಚಾರ ಮಾಡಿಕೊಳ್ಳಬೇಡಿ. ವೈದ್ಯರ ಸಲಹೆಯಿಲ್ಲದೆ ಆ್ಯಂಟಿಬಯಾಟಿಕ್ ಅಥವಾ ಸ್ಟಿರಾಯ್ಡ್ ಗಳನ್ನು ತೆಗೆದುಕೊಳ್ಳಬಾರದು” ಎಂದು ಅವರು ಎಚ್ಚರಿಸಿದ್ದಾರೆ.

ದೇಶದಲ್ಲಿ ಪಾಸಿಟಿವಿಟಿ ರೇಟ್ ಶೇ.10.21

ದೇಶದಲ್ಲಿಂದ 1,59,632 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 40,863 ಜನರು ಗುಣಮುಖರಾಗಿದ್ದು, 327 ಮಂದಿ ಸಾವನ್ನಪ್ಪಿದ್ದಾರೆ.  ಸದ್ಯ ದೇಶದಲ್ಲಿ 5,90,611 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ರೇಟ್ ಶೇ.10.21ರಷ್ಟಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *