ದೆಹಲಿಯಲ್ಲಿ ಇಂದು ಕೊರೋನಾದಿಂದ 17 ಮಂದಿ ಸಾವು, 22,751 ಕೊರೋನಾ ಪಾಸಿಟಿವ್ ಪ್ರಕರಣ ವರದಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ಒಂದೇ ದಿನ 22,751 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಪಾಸಿಟಿವ್ ಪ್ರಮಾಣ ಶೇಕಡಾ 23.53ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ತಿಳಿಸಿದೆ.

 

ರಾಷ್ಟ್ರ ರಾಜಧಾನಿಯಲ್ಲಿ ಕಳೆದ ವರ್ಷ ಮೇ 1 ರಂದು 25,219 ಪಾಸಿಟಿವ್ ಪ್ರಕರಣಗಳೊಂದಿಗೆ ಶೇ. 31.61 ಪಾಸಿಟಿವ್ ಪ್ರಮಾಣ ದಾಖಲಾಗಿತ್ತು. ಕಳೆದ ವರ್ಷ ಮೇ 1 ರ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿವೆ.

ದೆಹಲಿಯಲ್ಲಿ ಕೊರೋನಾದಿಂದ ಇಂದು 17 ಮಂದಿ ಮೃತಪಟ್ಟಿದ್ದು, ಒಟ್ಟು 1,618 ಕೋವಿಡ್ ರೋಗಿಗಳು ಆಸ್ಪತ್ರೆಗಳಲ್ಲಿದ್ದಾರೆ.

ಒಟ್ಟು 79,954 ಆರ್‌ಟಿ-ಪಿಸಿಆರ್ ಸೇರಿದಂತೆ ಒಟ್ಟು 96,678 ಪರೀಕ್ಷೆಗಳನ್ನು ನಡೆಸಲಾಗಿದ್ದು, ಉಳಿದವು ರ್ಯಾಪಿಡ್ ಆಂಟಿಜನ್ ಪರೀಕ್ಷೆಗಳಾಗಿವೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *