ಬೆಂಗಳೂರು ದಕ್ಷಿಣ ವಲಯದಲ್ಲಿ ಕೋವಿಡ್‌ ಅಟ್ಟಹಾಸ, ಅಧಿಕಾರಿಗಳ ಸಭೆ ಕರೆದ ಸುಧಾಕರ್‌

 

ಬೆಂಗಳೂರು ದಕ್ಷಿಣ ವಲಯದಲ್ಲಿ ಕೋವಿಡ್‌ ಅಟ್ಟಹಾಸ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾಗಿರುವ ಮುಂಜಾಗರೂಕತಾ ಕ್ರಮಗಳ ಕುರಿತಾಗಿ ಚರ್ಚೆ ನಡೆಸಲು ಅಧಿಕಾರಿಗಳ ಸಭೆಯನ್ನು ಕರೆದ ಸುಧಾಕರ್‌

 

ಬೆಂಗಳೂರು: ಬೆಂಗಳೂರು ದಕ್ಷಿಣ ವಲಯದಲ್ಲಿ ಕೋವಿಡ್‌ 19 ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಉಂಟಾಗುತ್ತಿರುವುದರಿಂದ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ಅಧಿಕಾರಿಗಳ ಸಭೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ಕರೆದಿದ್ದಾರೆ.

ಈ ಕುರಿತಾಗಿ ಟ್ವೀಟ್ ಮೂಲಕ ಮಾಹಿತಿ ನೀಡಿದ ಅವರು, ಬೆಂಗಳೂರಿನ ದಕ್ಷಿಣ ವಲಯದಲ್ಲಿ ಕೋವಿಡ್‌ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಆ ಭಾಗದ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಎಷ್ಟು ಪ್ರಮಾಣದ ಟೆಸ್ಟ್‌ಗಳಾಗಿವೆ, ಸೋಂಕು ನಿಯಂತ್ರಣಕ್ಕೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಮಾಹಿತಿ ಪಡೆದು ಸೋಂಕು ನಿಯಂತ್ರಣಕ್ಕೆ ಬಿಗಿ ಕ್ರಮಕ್ಕೆ ಸೂಚಿಸುತ್ತೇನೆ ಎಂದಿದ್ದಾರೆ.

ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಅದರಲ್ಲೂ ಬೆಂಗಳೂರು ದಕ್ಷಿಣ ಭಾಗದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುತ್ತಿದೆ.

ಸೋಮವಾರ ಒಂದೇ ದಿನ ಬೆಂಗಳೂರಿನಲ್ಲಿ 1918 ಪ್ರಕರಣಗಳು ವರದಿಯಾಗಿವೆ. ಸದ್ಯ ಒಟ್ಟು ಸೋಂಕಿತರ ಸಂಖ್ಯೆ 109793 ಏರಿಕೆಯಾಗಿದೆ. ಈ ಪೈಕಿ ಸೋಮವಾರ 2,034 ಮಂದಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಒಟ್ಟು 73,363 ಬಿಡುಗಡೆ ಹೊಂದಿದ್ದಾರೆ.

ಬೆಂಗಳೂರು ನಗರದಲ್ಲಿ ಒಟ್ಟು 34,735 ಕೊರೊನಾ ವೈರಸ್ ಪ್ರಕರಣಗಳು ಸಕ್ರೀಯವಾಗಿದೆ. ಆದರೆ ಮರಣ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿವೆ. 26 ಮಂದಿ ಬೆಂಗಳೂರಿನಲ್ಲಿ ಕೋವಿಡ್‌ ಸೋಂಕಿಗೆ ತುತ್ತಾಗಿ ಸೋಮವಾರ ಮರಣ ಹೊಂದಿದ್ದಾರೆ. ಇದುವರೆಗೂ ಒಟ್ಟು 1694 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *