11 ಗಂಟೆಗೆ ಬಿಜೆಪಿ ಸೇರಲಿದ್ದಾರೆ ಕರ್ನಾಟಕದ ಸಿಂಗಂ: ತಮಿಳುನಾಡಿನಲ್ಲಿ ಕಮಲ ಅರಳಿಸಲು ಅಣ್ಣಾಮಲೈ ಸಜ್ಜು!

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ರಿಯಲ್ ಸಿಂಗಂ ಎಂದೇ ಖ್ಯಾತಿಗಳಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸ್ವಾಮಿ, ಇಂದು(ಮಂಗಳವಾರ) ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿದ್ದಾರೆ.

ನವದೆಹಲಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ರಿಯಲ್ ಸಿಂಗಂ ಎಂದೇ ಖ್ಯಾತಿಗಳಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸ್ವಾಮಿ, ಇಂದು(ಮಂಗಳವಾರ) ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಅಣ್ಣಾಮಲೈ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ತಮಿಳುನಾಡಿನಲ್ಲಿ ಪಕ್ಷದ ಜವಬಾಬ್ದಾರಿ ಹೊರಲಿರುವ ಅಣ್ಣಾಮಲೈ, ದ್ರಾವಿಡ ಪಕ್ಷಗಳ ಅಬ್ಬರದ ನಡುವೆ ರಾಜ್ಯದಲ್ಲಿ ಕಮಲವನ್ನು ಅರಳಿಸಲು ಸಜ್ಜಾಗಿದ್ದಾರೆ.

ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿಯೊಂದೇ ರಾಷ್ಟ್ರೀಯವಾದಿ ಪಕ್ಷವಾಗಿದ್ದು, ನಾನು ಕೂಡ ರಾಷ್ಟ್ರವಾದಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತೇನೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುತ್ತಿರುವುದಾಗಿ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರ ಕಾರ್ಯವೈಖರಿಯನ್ನು ಮೆಚ್ಚಿ ಯಾವುದೇ ಪೂರ್ವ ಷರತ್ತುಗಳಲ್ಲಿದೇ ಬಿಜೆಪಿಯನ್ನು ಸೇರುತ್ತಿರುವುದಾಗಿ ಅಣ್ಣಾಮಲೈ ಖಚಿತಪಡಿಸಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಒಂದು ದಶಕಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿರುವ ಈ ಮಾಜಿ ಐಪಿಎಸ್ ಅಧಿಕಾರಿ, ತಮ್ಮ ನೇರ ಹಾಗೂ ನಿಷ್ಠುರ ನಡೆಗಳಿಂದ ‘ಕರ್ನಾಟಕದ ಸಿಂಗಂ’ ಎಂದೇ ಖ್ಯತಿಗಳಿಸಿದ್ದರು.

ಸುಧಾಕರ್ ಟ್ವೀಟ್:
ಇನ್ನು ಅಣ್ಣಾಮಲೈ ಬಿಜೆಪಿ ಸೇರುತ್ತಿರುವುದನ್ನು ಸ್ವಾಗತಿಸಿರುವ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ತಮ್ಮ ಪ್ರಾಮಾಣಿಕತೆ ಹಾಗೂ ದಕ್ಷತೆಗೆ ಹೆಸರಾಗಿರುವ ಅಣ್ಣಾಮಲೈ ಪಕ್ಷ ಸೇರುತ್ತಿರುವುದು ಅತೀವ ಸಂತಸ ತಂದಿದೆ ಎಂದು ಹೇಳಿದ್ದಾರೆ. ಅಣ್ಣಾಮಲೈ ಅವರಿಗೆ ತುಂಬು ಹೃದಯದಿಂದ ಸ್ವಾಗತ ನೀಡುವುದಾಗಿ ಸುಧಾಕರ್ ಹೇಳಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *