ಕೇಂದ್ರ ಬಜೆಟ್‌ನಲ್ಲಿ ಚಿನ್ನದ ಬೆಲೆ ಇಳಿಕೆ ಬೆನ್ನಲ್ಲೇ ಬುಧವಾರ ಚಿನ್ನ-ಬೆಳ್ಳಿಯ ಬೆಲೆ ಹೇಗಿದೆ? ಇಲ್ಲಿದೆ ವಿವರ

ಹೈಲೈಟ್ಸ್‌:

  • ನಿಮ್ಮ ನಗರದಲ್ಲಿ ಇಂದು ಚಿನ್ನ-ಬೆಳ್ಳಿಯ ಬೆಲೆ ಹೇಗಿದೆ?
  • ಇಂದು ಚಿನ್ನಾಭರಣ ಖರೀದಿಸಲು ಸೂಕ್ತ ಸಮಯವೇ?
  • ದೇಶದ ಪ್ರಮುಖ ನಗರಗಳ ದೈನಂದಿನ ಬೆಲೆ ವಿವರ ಇಲ್ಲಿದೆ

ಬೆಂಗಳೂರು : ಕಳೆದ ಕೆಲ ಸಮಯಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಲೇ ಬಂದಿದ್ದ ಚಿನ್ನದ ದರ, ಆಭರಣ ಪ್ರಿಯರಿಗೆ ನಿರಾಸೆ ಮೂಡಿಸಿತ್ತು. ಹೀಗಾಗಿ ಸಹಜವಾಗಿಯೇ ಬಂಗಾರ ಪ್ರಿಯರು ಕೇಂದ್ರ ಬಜೆಟ್‌ (Union Budget 2022) ಮಂಡನೆ ಹಿನ್ನೆಲೆಯಲ್ಲಿ ಬೆಲೆ ಇಳಿಕೆಯ ನಿರೀಕ್ಷೆಯಲ್ಲಿದ್ದರು. ಕೇಂದ್ರ ಬಜೆಟ್‌ನಲ್ಲಿ ಚಿನ್ನದ ಬೆಲೆ ಇಳಿಕೆ ಮಾಡಿದ ಖುಷಿಯಲ್ಲಿ ಗ್ರಾಹಕರಿದ್ದಾರೆ.

ಇಂದು ಫೆಬ್ರವರಿ 2 ಬುಧವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರದ ಬೆಲೆ ₹4,898 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರಕ್ಕೆ ₹4,898 ರೂ ನಿಗದಿಯಾಗಿದೆ.

ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ ₹44,900 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ ₹48,980 ರೂಪಾಯಿ ದಾಖಲಾಗಿದೆ.

ಬೆಳ್ಳಿ ದರ
ದೇಶದಲ್ಲಿ ಬೆಳ್ಳಿ ಬೆಲೆ ಇಂದು ಒಂದು ಕೆಜಿಗೆ ₹62,000 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹65,600 ರೂ. ಇದೆ. ದೇಶಾದ್ಯಂತ ಕೆಲವು ನಗರಗಳನ್ನು ಹೊರತುಪಡಿಸಿ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏಕರೂಪವಿದೆ. ಚೆನ್ನೈ, ವಿಜಯವಾಡ, ಹೈದರಾಬಾದ್, ವಿಶಾಖಪಟ್ಟಣಂದಲ್ಲಿಯೂ ₹65,600 ರೂ. ನಿಗದಿಯಾಗಿದೆ.

ಪ್ರಮುಖ ನಗರಗಳಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆ ಹೀಗಿದೆ,
ಬೆಂಗಳೂರು: ₹44,900 (22 ಕ್ಯಾರಟ್‌) – ₹48,980 (24 ಕ್ಯಾರಟ್‌)
ಚೆನ್ನೈ: ₹45,320 (22 ಕ್ಯಾರಟ್‌) – ₹49,440 (24 ಕ್ಯಾರಟ್‌)
ದಿಲ್ಲಿ: ₹44,900 (22 ಕ್ಯಾರಟ್‌) – ₹48,980 (24 ಕ್ಯಾರಟ್‌)
ಹೈದರಾಬಾದ್‌: ₹44,900 (22 ಕ್ಯಾರಟ್‌) – ₹48,980 (24 ಕ್ಯಾರಟ್‌)

ಕೋಲ್ಕತಾ: ₹44,900 (22 ಕ್ಯಾರಟ್‌) – ₹49,090 (24 ಕ್ಯಾರಟ್‌)
ಮಂಗಳೂರು: ₹44,900 (22 ಕ್ಯಾರಟ್‌) – ₹48,980 (24 ಕ್ಯಾರಟ್‌)
ಮುಂಬಯಿ: ₹44,900 (22 ಕ್ಯಾರಟ್‌) – ₹48,980 (24 ಕ್ಯಾರಟ್‌)
ಮೈಸೂರು: ₹44,900 (22 ಕ್ಯಾರಟ್‌) – ₹48,980 (24 ಕ್ಯಾರಟ್‌)

ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ತಟಸ್ಥತೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ.

ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *