ಜೆಡಿಎಸ್ ಪಕ್ಷಕ್ಕೆ ನೂತನ ಪದಾಧಿಕಾರಿಗಳ ನೇಮಕ; ಯಾರೆಗೆ ಯಾವ ಹುದ್ದೆ? ಇಲ್ಲಿದೆ ಪಟ್ಟಿ

ಹೈಲೈಟ್ಸ್‌:

  • ಜೆಡಿಎಸ್ ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ ಎಚ್.ಡಿ.ಕುಮಾರಸ್ವಾಮಿ
  • ಪಕ್ಷ ಸೇರಿದ ವಿಶ್ರಾಂತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಅವರಿಗೆ ಹಿರಿಯ ಉಪಾಧ್ಯಕ್ಷ ಸ್ಥಾನ; ವೆಂಕಟರಾವ್ ನಾಡಗೌಡರಿಗೆ ಮಹಾ ಪ್ರಧಾನ ಕಾರ್ಯದರ್ಶಿ ಹುದ್ದೆ.
  • ಐವರು ಕಾರ್ಯಾಧ್ಯಕ್ಷರು, ಮೂವರು ಹಿರಿಯ ಉಪಾಧ್ಯಕ್ಷರ ನೇಮಕ; ಶಾಸಕ ರವಿಕುಮಾರ್ ಖಜಾಂಚಿ

ಬೆಂಗಳೂರು: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರು, ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಐವರು ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಅಲ್ಕೊಡ್ ಹನುಮಂತಪ್ಪ, ಸಿ.ಬಿ.ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟೀಲ್ (ರಾಜೂಗೌಡ), ಸಾ.ರಾ.ಮಹೇಶ್, ದೊಡ್ಡಪ್ಪಗೌಡ ಶಿವಲಿಂಗಪ್ಪಗೌಡ ನರೆಬೋ ಮುನ್ನಡೆಸಲಿದ್ದಾರೆ.

ಹಿರಿಯ ಉಪಾಧ್ಯಕ್ಷರಾಗಿ ಡಾ.ಶ್ರೀನಿವಾಸ ಮೂರ್ತಿ, ರವೀಂದ್ರ ಶ್ರೀಕಂಠಯ್ಯ, ಸೋಮಣ್ಣ ಗೌಡ ಪಾಟೀಲ್, ಜ್ಯೋತಿ ಪ್ರಕಾಶ್ ಮಿರ್ಜಿ ಇರಲಿದ್ದಾರೆ.

ಉಪಾಧ್ಯಕ್ಷರಾಗಿ ಕೆ.ಎಂ.ತಿಮ್ಮರಾಯಪ್ಪ, ರಾಜಾ ವೆಂಕಟಪ್ಪ ನಾಯಕ ದೊರೆ, ಕರೆಮ್ಮ ಜಿ..ನಾಯಕ, ಚೌಡರೆಡ್ಡಿ ತೂಪಲ್ಲಿ, ಸುನೀತಾ ಚೌಹಾಣ್, ಕೆ.ಬಿ.ಪ್ರಸನ್ನ ಕುಮಾರ್, ಟಿ. ಎ.ಶರವಣ ಆಯ್ಕೆಯಾಗಿದ್ದಾರೆ. ಮಹಾ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟರಾವ್ ನಾಡಗೌಡ, ಖಜಾಂಚಿಯಾಗಿ ಬಿ.ಎನ್.ರವಿಕುಮಾರ್ ನೇಮಕಗೊಂಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳು ಯಾರೆಲ್ಲಾ?

ಎ. ಪಿ.ರಂಗನಾಥ್, ಅರ್ ಪ್ರಕಾಶ್, ಸಯ್ಯದ್ ರೋಷನ್ ಅಬ್ಬಾಸ್, ರೆಹಮತುಲ್ಲಾ ಖಾನ್, ಸುಧಾಕರ್ ಲಾಲ್, ಶಿವಕುಮಾರ ನಾಟೀಕಾರ್, ಶಾರದಾ ಅಪ್ಪಾಜಿಗೌಡ, ರೂತ್, ಮನೋರಮಾ, ಮಲ್ಲೇಶ್ ಬಾಬು, ವೀರಭದ್ರಪ್ಪ ಹಲರವಿ

ಕಾರ್ಯದರ್ಶಿಗಳು

ಮಹಂತಯ್ಯಮಠ, ಶಂಸಿ ತಬ್ರಾಜ್, ಐಲಿನ್ ಜಾನ್ ಮಠಪತಿ, ಬಿ.ಕಾಂತರಾಜ್, ಡಾ.ವಿಜಯ ಕುಮಾರ್, ಡಾ.ಶೀಲಾ ನಾಯಕ್, ರೋಷನ್ ಬಾವಾಜಿ, ಚಂದ್ರಕಾಂತ್ ಶೇಕಾ, ಕನ್ಯಾಕುಮಾರಿ, ಸಿದ್ದಬಸಪ್ಪ ಯಾದವ್

ಜಿಲ್ಲಾಧ್ಯಕ್ಷರ ನೇಮಕ

ಐದು ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಮಟ್ಟದ ಮೂರು ವಿಭಾಗಗಳಿಗೆ ರಾಜ್ಯಾಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರನ್ನು ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಶ್ಮಿ ರಾಮೇಗೌಡ ಅವರನ್ನು ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಾಜು ನಾಯಕ ಅವರನ್ನು ಯುವ ಜನತಾದಳದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಶಿಕ್ಷಕರ ಕ್ಷೇತ್ರದ ಚುನಾವಣೆ ಉಸ್ತುವಾರಿ

ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಆಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಣದಲ್ಲಿರುವ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರ ಗೆಲುವಿಗೆ ಶ್ರಮಿಸಲು ಮೂವರು ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಇ.ಕೃಷ್ಣಪ್ಪ, ಬೆಂಗಳೂರು ನಗರದ ಮಾಜಿ ಅಧ್ಯಕ್ಷ ಆರ್ ಪ್ರಕಾಶ್ ಅವರಿಗೆ ಈ ಹೊಣೆ ವಹಿಸಲಾಗಿದೆ.

ಸರಣಿ ಸಭೆಗಳು, ಮುಖಂಡರಿಗೆ ಖಡಕ್ ಸೂಚನೆ

ಪಕ್ಷದ ಕಚೇರಿ ಜೆ ಪಿ ಭವನದಲ್ಲಿ ಸರಣಿ ಸಭೆಗಳು ನಡೆದವು. ಮೊದಲು ರಾಜ್ಯ ಕೋರ್ ಕಮಿಟಿ ಸಭೆ ನಡೆದು, ಪಕ್ಷದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಯಿತು. ಅಲ್ಲದೆ, ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಅಲ್ಲದೆ, ಶಿಕ್ಷಕರ ಕ್ಷೇತ್ರ ಹಾಗೂ ಲೋಕಸಭೆ ಚುನಾವಣೆಯ ಉಸ್ತುವಾರಿಗಳ ಹೆಸರುಗಳನ್ನು ಅಂತಿಮಗೊಳಿಸಲಾಯಿತು.

ಕೋರ್ ಕಮಿಟಿ ಸಭೆಯಲ್ಲಿ ಜಿಟಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ, ಆಲ್ಕೊಡ್ ಹನುಮಂತಪ್ಪ, ಹೆಚ್.ಕೆ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಎ.ಮಂಜು, ನೆಮಿರಾಜ್ ನಾಯಕ್, ದೊಡ್ಡಪ್ಪ ಗೌಡ ಪಾಟೀಲ್, ರಾಜಾ ವೆಂಕಟಪ್ಪ ನಾಯಕ ದೊರೆ, ಸುನೀತಾ ಚೌಹಾಣ್, ಡಿ.ನಾಗರಾಜಯ್ಯ, ಡಿಸಿ ತಮ್ಮಣ್ಣ, ಕೆ.ಎಂ.ಕೃಷ್ಣಾರೆಡ್ಡಿ, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಕೆ.ಎ.ತಿಪ್ಪೇಸ್ವಾಮಿ, ಚಂದ್ರಶೇಖರ್, ಪ್ರಸನ್ನ ಕುಮಾರ್, ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲಹರವಿ, ಸೂರಜ್ ನಾಯಕ್ ಸೋನಿ ಅವರು ಭಾಗಿಯಾಗಿದ್ದರು.

ತದ ನಂತರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಶಾಸಕರಾದ ಕೃಷ್ಣಪ್ಪ, ನೇಮಿರಾಜ್,ರಾಜೂಗೌಡ, ಕರೆಮ್ಮ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ನಗರ ಜನತಾದಳ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಎಲ್ಲಾ ಶಾಸಕರು, ಮಾಜಿ ಶಾಸಕರು ಹಾಜರಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *