ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ:ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಕಲಬುರಗಿ::ಕಲಬುರಗಿ ಜಿಲ್ಲೆಯಾದ್ಯಂತ ಇದೇ ಮಾರ್ಚ್ 26 ರಿಂದ ಏಪ್ರಿಲ್ 6ರವರೆಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು ಕಲಬುರಗಿ ನಗರ ಹಾಗೂ ಜಿಲ್ಲೆಯ ಒಟ್ಟು 124 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ.

ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲಾ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು 1973ರ ಸಿ.ಆರ್.ಪಿ.ಸಿ. ಕಲಂ 144ರ ಅನ್ವಯ ಗುರುವಾರ ಈ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ-35(ಸಿ)ರ ಅನ್ವಯ ಪರೀಕ್ಷಾ ಸಮಯದಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಿಬ್ಬಂದಿ ವರ್ಗದವರನ್ನು ಹೊರತುಪಡಿಸಿ, ಯಾವುದೇ ಬೇರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್ ಹಾಗೂ ವೈರಲೆಸ್ ಸೆಟ್‍ಗಳು ಹಾಗೂ ಮತ್ತಿತರ ಎಲೆಕ್ಟ್ರಾನಿಕ್ಸ್ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿನ ಎಲ್ಲಾ ಜೆರಾಕ್ಸ್ ಮತ್ತು ಪುಸ್ತಕ ಅಂಗಡಿ ಮುಂತಾದವನ್ನು ಮುಚ್ಚುವಂತೆಯೂ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *