Conversion: ಇನ್ಮುಂದೆ ಹಿಂದೂ ಧರ್ಮದಿಂದ ಬೇರೆ ಧರ್ಮಕ್ಕೆ ಮತಾಂತರವಾಗಲು ಇದನ್ನು ಮಾಡಲೇಬೇಕು; ಸರ್ಕಾರದಿಂದ ಆದೇಶ
ಅಹಮದಾಬಾದ್: ಇತ್ತೀಚಿನ ವರ್ಷಗಳಲ್ಲಿ ಮತಾಂತರದಂತಹ (Conversion) ಪ್ರಕ್ರಿಯೆಗಳು ಅಲ್ಲಲ್ಲಿ ಕೇಳು ಬರುತ್ತಿದ್ದು, ಈ ಹಿನ್ನೆಲೆ ಗುಜರಾತ್ ಸರ್ಕಾರ (Gujarat Govt) ಮತಾಂತರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಇಂಡಿಯಾ ಟುಡೇ ವರದಿಯ ಪ್ರಕಾರ, ಒಬ್ಬ ವ್ಯಕ್ತಿಯು ತನ್ನ ಧರ್ಮವನ್ನು ಬದಲಾಯಿಸಿದರೆ ಮತ್ತು ಹಿಂದೂ, ಬೌದ್ಧ, ಸಿಖ್ ಅಥವಾ ಜೈನ ಧರ್ಮವನ್ನು ಅಳವಡಿಸಿಕೊಂಡರೆ, ಅವರು ಗುಜರಾತ್ ಧರ್ಮದ ಸ್ವಾತಂತ್ರ್ಯ ಕಾಯಿದೆ 2003 ರ ನಿಬಂಧನೆಯ ಅಡಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ನಿಂದ ಅನುಮತಿ ಪಡೆಯಬೇಕು ಎಂದು ಸರ್ಕಾರ ಹೇಳಿದೆ. ಈ ಸುತ್ತೋಲೆಯನ್ನು ಗುಜರಾತ್ ಗೃಹ ಇಲಾಖೆಯು ಏಪ್ರಿಲ್ 8 ರಂದು ಹೊರಡಿಸಿದೆ.
ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಆಗುವವರಿಗೆ ಸಂಬಂಧಿಸಿದಂತೆ ಗುಜರಾತ್ ಸರ್ಕಾರ ಈ ಮಹತ್ವದ ನಿರ್ಧಾರವನ್ನು ಮಾಡಿದ್ದು, ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಲು ಬಯಸುವವರು ಸಹ ಜಿಲ್ಲಾ ಮ್ಯಾಜಿಸ್ಟ್ರೇಟ್ನಿಂದ ಅನುಮತಿ ಪಡೆಯಬೇಕು. ಯಾಕೆಂದರೆ ರಾಜ್ಯ ಸರ್ಕಾರವು ಬೌದ್ಧ ಧರ್ಮ ಪ್ರತ್ಯೇಕ ಧರ್ಮ ಎಂದು ಸ್ಪಷ್ಟಪಡಿಸಿ ಸುತ್ತೋಲೆ ಹೊರಡಿಸಿದೆ.
ಸುತ್ತೋಲೆಯಲ್ಲಿ ಇನ್ನೇನು ಹೇಳಲಾಗಿದೆ:
‘ಬೌದ್ಧ ಧರ್ಮಕ್ಕೆ ಮತಾಂತರಕ್ಕೆ ನಿಯಮಾನುಸಾರ ಅರ್ಜಿ ಸಲ್ಲಿಸದಿರುವುದನ್ನು ಸರ್ಕಾರ ಗಮನಿಸಿದೆ’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಗುಜರಾತಿನಲ್ಲಿ ಪ್ರತಿ ವರ್ಷ ದಸರಾ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಜನರನ್ನು ಬೌದ್ಧ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿತ್ತು ಮತ್ತು ಈ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ. ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಲು ಯಾವುದೇ ಪೂರ್ವಾನುಮತಿ ಅಗತ್ಯವಿಲ್ಲ ಎಂದು ಅರ್ಜಿದಾರರು ಕೆಲವೊಮ್ಮೆ ಹೇಳುತ್ತಿದ್ದಾರೆ ಎಂದು ಹೇಳಲಾಗಿದೆ.
ಇನ್ನು, ರಾಜ್ಯ ಸರ್ಕಾರದ ಸುತ್ತೋಲೆಯ ಪ್ರಕಾರ ಮತಾಂತರದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು, ಮತಾಂತರಕ್ಕೆ ಪೂರ್ವಾನುಮತಿ ಕೋರಿ ಅರ್ಜಿಗಳು ಸಲ್ಲಿಕೆಯಾದ ಸಂದರ್ಭಗಳಲ್ಲಿ, ಸಿಖ್, ಜೈನ ಮತ್ತು ಬೌದ್ಧ ಧರ್ಮಗಳು ಸಂವಿಧಾನದ ವ್ಯಾಪ್ತಿಯಲ್ಲಿವೆ ಎಂದು ಪರಿಗಣಿಸಿ ಸಂಬಂಧಪಟ್ಟ ಕಚೇರಿಗಳು ಅಂತಹ ಅರ್ಜಿಗಳನ್ನು ವಿಲೇವಾರಿ ಮಾಡುತ್ತವೆ. ಆರ್ಟಿಕಲ್ 25 (2) ಅಡಿಯಲ್ಲಿ ಹಿಂದೂ ಧರ್ಮ, ಆದರೆ, ಗುಜರಾತ್ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ ಪ್ರಕಾರ ಬೌದ್ಧ ಧರ್ಮವನ್ನು ಪ್ರತ್ಯೇಕ ಧರ್ಮವೆಂದು ಪರಿಗಣಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಇನ್ನೊಬ್ಬ ವ್ಯಕ್ತಿಯನ್ನು ಹಿಂದೂ ಧರ್ಮದಿಂದ ಬೌದ್ಧ, ಸಿಖ್ ಅಥವಾ ಜೈನ ಧರ್ಮಕ್ಕೆ ಮತಾಂತರಿಸುವ ವ್ಯಕ್ತಿ ಜಿಲ್ಲಾ ಮ್ಯಾಜಿಸ್ಟ್ರೇಟ್ನಿಂದ ಪೂರ್ವಾನುಮತಿ ಪಡೆಯಬೇಕು. ಇದಲ್ಲದೇ ಧರ್ಮ ಪರಿವರ್ತನೆ ಮಾಡುವವರು ಜಿಲ್ಲಾಧಿಕಾರಿಗಳಿಗೆ ನಿಗದಿತ ನಮೂನೆಯಲ್ಲಿ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.