ಜಯನಗರದಲ್ಲಿ ಸೀಜ್ ಆದ ಕೋಟ್ಯಾಂತರ ರೂಪಾಯಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು : ತೇಜಸ್ವಿ ಸೂರ್ಯ
ಹೈಲೈಟ್ಸ್:
- ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ಹಣ
- ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯ ಜಯನಗರ ಅಸೆಂಬ್ಲಿ ಕ್ಷೇತ್ರ
- ಕೋಟ್ಯಾಂತರ ರೂಪಾಯಿ ಹಣ ಚುನಾವಣಾಧಿಕಾರಿಗಳ ವಶಕ್ಕೆ
ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯ ಜಯನಗರ ಅಸೆಂಬ್ಲಿಯಲ್ಲಿ ಕೋಟ್ಯಾಂತರ ರೂಪಾಯಿ ದಾಖಲೆಯಿಲ್ಲದ ಹಣವನ್ನು ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದು, ಕಾಂಗ್ರೆಸ್ಸಿಗೆ ಸೇರಿದ್ದು ಎಂದು ಬಿಜೆಪಿ ಸಂಸದರು ಆರೋಪಿಸಿದ್ದಾರೆ.
” ಬೆಳಗ್ಗೆ ನಮಗೆ ಇಬ್ಬರು ಫೋನ್ ಮಾಡಿ ಕಾಂಗ್ರೆಸ್ಸಿನವರು ಕೆಂಪು ಬಣ್ಣದ ವೋಕ್ಸವ್ಯಾಗನ್ ಕಾರಿನಲ್ಲಿ ಮತ್ತು ಬಿಳಿ ಬಣ್ಣದ ಇನ್ನೂ ನೊಂದಾಣಿಯಾಗದ ಬೆನ್ಜ್ ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿದ್ದಾರೆ. ಕೋಟ್ಯಾಂತರ ರೂಪಾಯಿ ದುಡ್ಡನ್ನು ಸಾಗಿಸುತ್ತಿದ್ದಾರೆ ಎಂದು ಯಾರಿಂದ ಬಲವಂತವಾಗಿ ಕಾಂಗ್ರೆಸ್ಸಿನವರು ದುಡ್ಡು ತೆಗೆದುಕೊಂಡಿದ್ದಾರೋ ಅವರು ಕಚೇರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ ” ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.