Karnataka Rain: ರಣ ಬಿಸಿಲಿನ ನಡುವೆ ಮಳೆಯ ಮನ್ಸೂಚನೆ ನೀಡಿದ ಹವಾಮಾನ ಇಲಾಖೆ!
ಬೆಂಗಳೂರು: ಸುಡುತ್ತಿರುವ ಬಿಸಿಲಿನ ನಡುವೆ ಮುಂದಿನ ಒಂದೆರಡು ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಮುಂದಿನ 4 ದಿನಗಳವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ-ಬೆಂಗಳೂರು ನಿರ್ದೇಶಕರಾದ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಮುಂದುವರಿದ ರಣ ಬಿಸಿಲು!
ಈ ನಡುವೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ ಮುಂದುವರೆದಿದೆ. ಕಲಬುರಗಿಯಲ್ಲಿ ಗುರುವಾರ 43 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಉಳಿದಂತೆ ಬೀದರ್, ಯಾದಗಿರಿ, ರಾಯಚೂರು, ವಿಜಯನಗರ, ಕಲಬುರಗಿ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಕಲಬುರಗಿಯ ಮುಂತಾದೆಡೆ ಬಿಸಿಗಾಳಿ ಮುಂದುವರೆಯಲಿದೆ ಎಂದು ಸಿಎಸ್ ಪಾಟೀಲ್ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಸ್ಥಿತಿಗತಿ!
ಬೆಂಗಳೂರಿನಲ್ಲಿ ಮುಂದಿನ 4 ದಿನಗಳ ಕಾಲ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಆದರೆ, ಮೇ 6ರ ನಂತರ 2 ದಿನಗಳ ಕಾಲ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆ ಜಾಸ್ತಿ ಇದೆ.