ಕೊರೋನಾ ಹಾವಳಿ, ಅತಿವೃಷ್ಟಿಯಿಂದ ತಪ್ಪಿಸಿಕೊಳ್ಳಲು ರಾಜ್ಯ ಸರ್ಕಾರ ಡ್ರಗ್ಸ್ ಹಗರಣದ ತನಿಖೆ ನಡೆಸಿದಂತಿದೆ- ಸಿದ್ದರಾಮಯ್ಯ
ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ. ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶವಿಲ್ಲ. ಕೊರೋನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣ್ತಿದೆ.
ಅಲ್ಲದೆ ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನ ಮಾಡ್ತಿದಾರೆಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.