ಷರಿಷತ್‌ನ ನೈರುತ್ಯ ಶಿಕ್ಷಕರು, ಪದವೀಧರರ ಕ್ಷೇತ್ರ ಚುನಾವಣೆಗೆ ಸಕಲ ಸಿದ್ಧತೆ

ಮಡಿಕೇರಿ : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರದ, ನೈರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೆತ್ರೖವಾರ್ಷಿಕ ಚುನಾವಣೆಗೆ ದಿನಗಣನೆ ಆರಂಭವಾಗಿದೆ.

ಜೂ.3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಜೂ.6 ರಂದು ಮತ ಎಣಿಕೆ ನಡೆಯಲಿದೆ. ಮೇ 20 ಉಮೇದುವಾರಿಕೆ ಹಿಂಪಡೆಯಲು ಅಂತಿಮ ದಿನವಾಗಿತ್ತು. ಅದರಂತೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 2, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ 1 ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ 1 ಅಭ್ಯರ್ಥಿ ನಾಮಪತ್ರಗಳನ್ನು ಹಿಂಪಡೆದಿದ್ದಾರೆ. ಅಂತಿಮವಾಗಿ ಕಣದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 11 ಅಭ್ಯರ್ಥಿಗಳು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ 8 ಅಭ್ಯರ್ಥಿಗಳು ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ನೈರುತ್ಯ ಪದವೀಧರರ ಕ್ಷೇತ್ರದ, ನೈರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ. ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳು ಮತ್ತು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಚನ್ನಗಿರಿ ತಾಲೂಕು ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕ್ಷೇತ್ರ ವ್ಯಾಪ್ತಿಗೆ ಒಳಪಡುತ್ತದೆ.

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳು ಒಳಗೊಂಡಂತೆ ಒಟ್ಟು 79 ಮತಗಟ್ಟೆಗಳಿದ್ದು, 23402 ಮತದಾರರು ಇದ್ದಾರೆ. ಅದರಲ್ಲಿ10487 ಪುರುಷರು ಮತ್ತು 12915 ಮಹಿಳಾ ಮತದಾರರು ಇದ್ದಾರೆ. ಕೊಡಗು ಜಿಲ್ಲೆಯಲ್ಲಿ 5 ಮತಗಟ್ಟೆಗಳಿದ್ದು, 1578 ಮತದಾರರು ಇದ್ದಾರೆ. ಅದರಲ್ಲಿ 543 ಪುರುಷರು ಮತ್ತು 1035 ಮಹಿಳಾ ಮತದಾರರು ಇದ್ದಾರೆ.

ಮತದಾರರಿಗೆ ಯಾವುದೇ ವಿಧವಾದ ಆಮಿಷಗಳನ್ನು ಒಡ್ಡುವುದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಲಿದ್ದು, ಆಮಿಷ ಒಡ್ಡುತ್ತಿರುವ ಬಗ್ಗೆ ದೂರನ್ನು ಸಂಬಂಧಿಸಿದ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗೆ ಮತ್ತು ಚುನಾವಣಾ ವೀಕ್ಷಕರಿಗೆ ಸಲ್ಲಿಸಬಹುದು. ಮೂರು ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರು(ಅಬ್ಸರ್‌ವರ್ಸ್) ನೇಮಕಗೊಂಡಿದ್ದಾರೆ.

ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಚುನಾವಣಾ ವೀಕ್ಷಕರಾಗಿ ಅನಿಲ್‌ ಕುಮಾರ್‌.ಟಿ.ಕೆ(7204064565), ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಹರ್ಷ ಗುಪ್ತ (7204294565) ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಡಾ.ರವಿಶಂಕರ್‌ (7204214565) ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಕ ಮಾಡಲಾಗಿದೆ.

ನೈರುತ್ಯ ಶಿಕ್ಷಕರ ಕ್ಷೇತ್ರ

ಕಣದಲ್ಲಿರುವ ಅಭ್ಯರ್ಥಿಗಳು 08

ಒಟ್ಟು ಮತಗಟ್ಟೆ 79

ಒಟ್ಟು ಮತದಾರರ ಸಂಖ್ಯೆ 23402

ಕೊಡಗು ಜಿಲ್ಲೆಯ ಮತದಾರರು 1578

ಬಾಕ್ಸ್‌ 2:

ನೈರುತ್ಯ ಪದವೀಧರರ ಕ್ಷೇತ್ರ

ಕಣದಲ್ಲಿರುವ ಅಭ್ಯರ್ಥಿಗಳು 10

ಒಟ್ಟು ಮತಗಟ್ಟೆ 108

ಒಟ್ಟು ಮತದಾರರ ಸಂಖ್ಯೆ 85089

ಕೊಡಗು ಜಿಲ್ಲೆಯ ಮತದಾರರು 3909

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *