ಭಕ್ತಾದಿಗಳ ಗಮನಕ್ಕೆ : ಇಂದಿನಿಂದ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ದರ್ಶನಕ್ಕೆ ಅವಕಾಶ..!

ದಕ್ಷಿಣ ಕನ್ನಡದ ಪ್ರಸಿದ್ಧ ಕ್ಷೇತ್ರವಾಗಿರುವ, ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ, ಕೊರೋನಾ ಹಾವಳಿಯಿಂದ, ನಿಂತು ಹೋಗಿದ್ದ ಸೇವೆಗಳು ಮತ್ತೆ ಇಂದಿನಿಂದ ಪುನರಾರಂಭಗೊಳ್ಳಲಿದೆ.

ನಾಡಿನ ಪ್ರಸಿದ್ದ ನಾಗಾರಾಧನೆಯ ಕ್ಷೇತ್ರವಾಗಿರುವ, ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ, ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು, ಹಲವು ಷರತ್ತುಗಳೊಂದಿಗೆ, ಇಂದು ಆರಂಭವಾಗಲಿದೆ. ದೇವಾಲಯದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಹಲವು ನಿಯಮಗಳನ್ನು ಜಾರಿಗೆ ತಂದು ಸೇವೆ ಆರಂಭಿಸಲು, ಧಾರ್ಮಿಕ ದತ್ತಿ ಇಲಾಖೆ ಅನುಮತಿ ನೀಡಿದೆ. ಸೇವಾರ್ಥಿಗಳಿಗೆ ಮಾತ್ರ ಭೋಜನ ವ್ಯವಸ್ಥೆ ಮಾಡಲಾಗುತ್ತೆ.

“ಸರ್ಪ ಸಂಸ್ಕಾರ ಸೇವೆ ಸಲ್ಲಿಸುವವರಿಗೆ ಎರಡು ದಿನ, ಬೇರೆ ಸೇವೆ ನೀಡುವವರಿಗೆ ಒಂದು ದಿನ ಮಾತ್ರ ದೇವಾಲಯದ ವಸತಿ ಗೃಹದಲ್ಲಿ ತಂಗಲು ಅವಕಾಶ ಕಲ್ಪಿಸಲಾಗುವುದು” ಆಡಳಿತಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ.

ದೇವಾಲಯ ಪ್ರತಿ ದಿನ ಬೆಳಗ್ಗೆ  6.30 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು 3.30 ರಿಂದ ರಾತ್ರಿ 8ಗಂಟೆಯವರೆಗೆ ದೇವಾಲಯ ತೆರೆದಿರುತ್ತದೆ. ಪ್ರತಿದಿನ ಮೂವತ್ತು ಭಕ್ತರಿಗೆ ಮಾತ್ರ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ನಡೆಸಲು ಅವಕಾಶ ನೀಡಲಾಗುವುದು ಎಂದು ದೇವಾಲಯದ ಪ್ರಕಟಣೆಯಲ್ಲಿ ಹೇಳಲಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *