ಅಶೋಕ್‌ ಒಬ್ಬ ಸುಳ್ಳುಗಾರ ಹಾಗೂ ಜೋಕರ್‌: ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು (ಜೂ.16): ‘ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌. ಅಶೋಕ್‌ ಒಬ್ಬ ಸುಳ್ಳುಗಾರ ಹಾಗೂ ಜೋಕರ್‌. ಕೇವಲ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಜೋಕರ್‌ ರೀತಿ ಮಾತನಾಡುತ್ತಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರ ಟ್ಯಾಂಕರ್‌ಗಳಿಂದ ಹಣ ವಸೂಲಿ ಮಾಡಿ ಹೈಕಮಾಂಡ್‌ಗೆ ಕಳುಹಿಸುತ್ತಿದೆ ಎಂಬ ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ಅಶೋಕ್ ಅವರು ಒಬ್ಬ ಸುಳ್ಳುಗಾರ ಮತ್ತು ಜೋಕರ್‌.

ಅವರ ಹೇಳಿಕೆ ಸತ್ಯವಾಗಿದ್ದರೆ ಯಾವುದಾದರೂ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಿ.  ತಮ್ಮ ಸರ್ಕಾರದ ಅವಧಿಯಲ್ಲಿ ಮಾಡಿದ ಅನುಭವವನ್ನು ಅವರು ಈಗ ಹೇಳುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು. ನೀರಿನ ಅಭಾವದ ಕುರಿತು ಮಾತನಾಡಿ, ಬೆಂಗಳೂರಿನಲ್ಲಿ ಈಗ ನೀರಿನ ಸಮಸ್ಯೆ ಇಲ್ಲ. ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದೆ ಎಂದಷ್ಟೇ ಹೇಳಿದರು. ಪ್ರತಿದಿನ ಕುಡಿಯುವ ನೀರಿನ ಪರೀಕ್ಷೆ ಕಡ್ಡಾಯ: ಕಲುಷಿತ ನೀರಿನ ಬಗ್ಗೆ ಪ್ರತಿಕ್ರಿಯಿಸಿ, ಪ್ರತಿದಿನ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಪರೀಕ್ಷೆ ನಡೆಸಿ ಜನರಿಗೆ ನೀಡಲಾಗುತ್ತಿದೆ.

ಕಾವೇರಿ, ಬೋರ್ ವೆಲ್ ನೀರನ್ನು ಸಹ ಪರೀಕ್ಷೆಗೆ ಒಳಪಡಿಸುತ್ತಿದ್ದು. ದಿನದ ವರದಿ ನನಗೂ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಪ್ರತಿದಿನವೂ ವರದಿ ನೀಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.  ಯಡಿಯೂರಪ್ಪ ಅವರ ಪ್ರಕರಣದಲ್ಲಿ ದ್ವೇಷ ರಾಜಕಾರಣ ಎಂಬ ಬಿಜೆಪಿ ಆರೋಪಕ್ಕೆ, ಇದು ಕಾನೂನಿನ ಪ್ರಕ್ರಿಯೆ. ಬಿಜೆಪಿ ನಾಯಕರು ನಮ್ಮ ಹೆಸರು ಯಾಕೆ ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದಿಲ್ಲ. ಇದರಲ್ಲಿ ನಮ್ಮ ಹಸ್ತಕ್ಷೇಪವಿಲ್ಲ ಎಂದು ಅವರಿಗೂ ಗೊತ್ತಿದೆ. ಆದರೂ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದರು.

ರೇಣುಕಾಸ್ವಾಮಿಗೆ ವಿದ್ಯುತ್‌ ಶಾಕ್‌ ಕೊಟ್ಟಿದ್ದು ಬೆಂಗಳೂರಿನ ಬಿಜೆಪಿ ಶಾಸಕರ ಸಂಬಂಧಿ ದೀಪಕ್‌

ಸುಳ್ಳಿಗೆ ಮತ್ತೊಂದು ಹೆಸರೇ ಬೊಮ್ಮಾಯಿ: ಡಿಕೆಶಿ ಕಿಡಿ ಸುಳ್ಳಿಗೆ ಮತ್ತೊಂದು ಹೆಸರೇ ಬೊಮ್ಮಾಯಿ ಅವರು ಎನ್ನುವಂತಾಗುತ್ತಿದೆ. ಭದ್ರಾ ಮೇಲ್ದಂಡೆ ವಿಚಾರದಲ್ಲಿ ಮತ್ತೆ ಮತ್ತೆ ಅದನ್ನು ಅವರು ಸಾಬೀತು ಮಾಡುತ್ತಿದ್ದಾರೆ. ಇದು ಆಗಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೇ ಭದ್ರಾ ಮೇಲ್ದಂಡೆ ಯೋಜನೆಯನ್ನು ಬಜೆಟ್ ಅಲ್ಲಿ ಅವರು ಸೇರಿಸಿಕೊಂಡರು. ಬೊಮ್ಮಾಯಿ ಅವರು ಸಹ ನೀರಾವರಿ ಸಚಿವರಾಗಿದ್ದವರು. ರಾಷ್ಟ್ರೀಯ ಯೋಜನೆ ಪ್ರಸ್ತಾವನೆ ಬಗ್ಗೆ ಏನೂ ಮಾಡಲಿಲ್ಲ ಎಂದು ತಿರುಗೇಟು ನೀಡಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *