Trending News: ಪಾಠ ಮಾಡೋ ಶಾಲೆಯಲ್ಲೇ ಹೆಡ್‌ ಮಾಸ್ಟರ್‌-ಶಿಕ್ಷಕಿಯ ಕಾಮದಾಟ! ರಾಸಲೀಲೆಯ ವಿಡಿಯೋ ವೈರಲ್!

rending News: ವಿದ್ಯೆ ಕಲಿಸುವ ಶಾಲೆಯನ್ನು ದೇಗುಲ ಅಂತಾನೂ ಕರೀತಾರೆ. ನಮ್ಮ ತಲೆಯಲ್ಲಿ ಜ್ಞಾನದ ಬೀಜ ಬಿತ್ತಿ, ಅಕ್ಷರ ಕಲಿಸುವ ಶಿಕ್ಷಕರು ಗುರು ಸಮಾನರು. ಅಂತಹ ಶಿಕ್ಷಣವನ್ನು ಬೋಧಿಸಲು ಇರುವ ಗೂಡು ಅಂದರೆ ಶಾಲೆ ದೇಗುಲಕ್ಕೆ ಸಮಾನ ಅನ್ನೋ ಮಾತಿದೆ. ಆದರೆ ಗುರು ಸಮಾನರಾದ ಶಿಕ್ಷಕರು ದೇವಾಲಯಕ್ಕೆ ಸಮಾನವಾದ ಶಾಲೆಯಲ್ಲೇ ಮಾಡಬಾರದ ಕೆಲಸ ಮಾಡಿ ತಗ್ಲಾಕ್ಕೊಂಡಿರುವ ಘಟನೆ ನಡೆದಿದೆ.

ಹೌದು.. ವಿದ್ಯೆ ಬೋಧಿಸುವ ಶಿಕ್ಷಕರು ಶಾಲಾ ಕೊಠಡಿಯಲ್ಲೇ ಪ್ರಣಯದಲ್ಲಿ ಮುಳುಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲದಿನಗಳಿಂದ ಭಾರೀ ವೈರಲ್ ಆಗುತ್ತಿದೆ. ಶಾಲಾ ಮುಖ್ಯ ಶಿಕ್ಷಕನೊಬ್ಬ ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಯುವತಿ ಜೊತೆ ಏಕಾಂತದಲ್ಲಿ ತೊಡಗಿದ್ದು, ಇದೀಗ ಅವರಿಬ್ಬರ ಖಾಸಗಿ ಕ್ಷಣದ ವಿಡಿಯೋಗಳು ಫೇಸ್‌ಬುಕ್, ಯೂಟ್ಯೂಬ್, ಟ್ವಿಟ್ಟರ್‌, ಇನ್ಸ್‌ಟಾಗ್ರಾಂ, ಟೆಲಿಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದ ವೇದಿಕೆಗಳಲ್ಲಿ ನೆಟ್ಟಿಗರಿಗೆ ಆಹಾರವಾಗಿದೆ.

ಅಂದ ಹಾಗೆ ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಜಾನ್‌ಪುರದಲ್ಲಿ. ಮುಖ್ಯ ಶಿಕ್ಷಕನೊಬ್ಬ, ಶಿಕ್ಷಕಿಯನ್ನು ತನ್ನ ಹತ್ತಿರಕ್ಕೆ ಎಳೆದುಕೊಂಡು ತನ್ನ ತೋಳುಗಳಲ್ಲಿ ಎತ್ತುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ನಂತರ ಆಕೆಯನ್ನು ತಬ್ಬಿಕೊಂಡ ಆತ ತುಟಿಗೆ ತುಟಿ ಇಟ್ಟು ದೀರ್ಘವಾಗಿ ಚುಂಬಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ನಂತರ ಶಿಕ್ಷಕಿಯ ಬೆನ್ನು ಸೇರಿದಂತೆ ದೇಹದಲ್ಲೆಲ್ಲ ಕೈಯಾಡಿಸುವ ದೃಶ್ಯವೂ ವಿಡಿಯೋದಲ್ಲಿ ಇದೆ. ನಂತರ ಆತ ಯಾರೊಂದಿಗೋ ಮೊಬೈಲ್‌ನಲ್ಲಿ ಮಾತನಾಡುತ್ತಾನೆ.

ವಿಡಿಯೋದಲ್ಲಿ, ಅಟಲ್ ಬಿಹಾರಿ ವಾಜಪೇಯಿ, ಮಹಾರಾಣಾ ಪ್ರತಾಪ್, ಭಗತ್ ಸಿಂಗ್ ಮತ್ತು ಇತರ ಹೆಸರಾಂತ ವ್ಯಕ್ತಿಗಳ ಫೋಟೋಗಳು ಕೋಣೆಯ ಗೋಡೆಗಳ ಮೇಲೆ ನೇತಾಡುತ್ತಿವೆ. ಈ ವಿಡಿಯೋ ಜಾನ್‌ಪುರದ ಸರ್ಪಥ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ವೆಂಟ್ ಶಾಲೆಯದ್ದು ಎಂದು ಹೇಳಲಾಗಿದೆ. ಶಾಲಾ ಕೊಠಡಿಯನ್ನೇ ತಮ್ಮ ತೀಟೆ ತೀರಿಸಿಕೊಳ್ಳಲು ಬಳಸಿರುವ ಶಾಲೆಯ ಶಿಕ್ಷಕನ ಮತ್ತು ಆತನಿಗೆ ಸಹಕರಿಸಿರುವ ಶಿಕ್ಷಕಿಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್!

ತರಗತಿ ನಡೆಯುತ್ತಿದ್ದಾಗಲೇ ಸೀಲಿಂಗ್ ಫ್ಯಾನ್ ಇದ್ದಕ್ಕಿದ್ದಂತೆ ಬಿದ್ದ ಪ್ರಕರಣ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಪುಷ್ಪಾ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ನಡೆದಿದೆ. ಶಾಲಾ ತರಗತಿಯ ಕೊಠಡಿಯಲ್ಲಿ ಸೀಲಿಂಗ್ ಫ್ಯಾನ್ ಏಕಾಏಕಿ ಬೀಳುವ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ದೃಶ್ಯ ಫುಲ್ ವೈರಲ್ ಆಗಿದೆ. ತರಗತಿಯಲ್ಲಿ ಮಕ್ಕಳಿಂದ ತುಂಬಿ ತುಳುಕುತ್ತಿರುವುದನ್ನು ವೈರಲ್ ವಿಡಿಯೋದಲ್ಲಿ ಕಾಣಬಹುದು.

ವಿಡಿಯೋದಲ್ಲಿ ಎಲ್ಲವೂ ಶಾಂತಿಯುತವಾಗಿ ನಡೆಯುತ್ತಿದೆ ಮತ್ತು ಮಕ್ಕಳು ತಮ್ಮ ಅಧ್ಯಯನದಲ್ಲಿ ನಿರತರಾಗಿದ್ದಾರೆ. ಆಗ ಏಕಾಏಕಿ ತರಗತಿಯಲ್ಲಿದ್ದ ಸೀಲಿಂಗ್ ಫ್ಯಾನ್ ಬೆಂಚಿನ ಮೂಲೆಯಲ್ಲಿ ಕುಳಿತ ಮಕ್ಕಳ ಮೇಲೆ ಬಿದ್ದಿದೆ. ಇದರಿಂದ ತರಗತಿ ಕೊಠಡಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

 

ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಇದ್ದ ಕೊಠಡಿಯಲ್ಲಿ ಫ್ಯಾನ್‌ ವಿದ್ಯಾರ್ಥಿನಿ ಮೇಲೆ ಬಿದ್ದಿದ್ದು, ಫ್ಯಾನ್ ಬಿದ್ದು ವಿದ್ಯಾರ್ಥಿಯ ಕೈಗೆ ತಾಗಿದೆ. ಈ ಅವಘಡದಲ್ಲಿ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದರ ನಂತರ, ವಿದ್ಯಾರ್ಥಿಯನ್ನು ತರಾತುರಿಯಲ್ಲಿ ಪುಷ್ಪಾ ಕಲ್ಯಾಣ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ಪ್ರಥಮ ಚಿಕಿತ್ಸೆ ನಂತರ ಭೋಪಾಲ್‌ಗೆ ಕಳುಹಿಸಲಾಯಿತು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *