ಪುರಸಭೆ ಮುಖ್ಯಾಧಿಕಾರಿ ಕೆ. ಲಕ್ಷ್ಮೀಶಗೆ ತರಾಟಗೆ ತೆಗೆದುಕೊಂಡ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ್
ಪುರಸಭೆ ಮುಖ್ಯಾಧಿಕಾರಿ ಕೆ. ಲಕ್ಷ್ಮೀಶಗೆ ತರಾಟಗೆ ತೆಗೆದುಕೊಂಡ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ್.
ಜೇವರ್ಗಿ ಪಟ್ಟಣದ ಓಂ ನಗರ ಬಡವಾಣೆಯಲ್ಲಿರುವ ಮೂರಾರ್ಜಿ ಸ್ಕೂಲ್ ಹೋಗುವ ದಾರಿಯಲ್ಲಿ ಸೇತುವೆ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ ನರಿಬೋಳ್. ಹಾಗೂ ತಾಲೂಕ ದಂಡಾಧಿಕಾರಿಗಳಾದ ಸಿದ್ದಾರಾಯ ಭೋಸಗಿ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಅಶೋಕ ಸಾಹುಕಾರ್, ಕೊಚ್ಚಿಹೋದ ಸೇತುವೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಶೋಕ್ ಸಾಹುಕಾರ್ ಗೋಗಿ ಪುರಸಭೆ ಮುಖ್ಯ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಅಧಿಕಾರಿಗಳು ಕಾಮಗಾರಿ ಪರಿಶೀಲನೆ ಮಾಡಬೇಕು ಅಲ್ಲೇ ಕಛೇರಿಯಲ್ಲಿ ಕುಳಿಕೊಂಡು ಮಾಡಿದ್ದರೆ ಈ ರೀತಿ ಮೂರು ದಿನಗಳಲ್ಲಿ ಕೊಚ್ಚಿಕೊಂಡು ಹೋಗುತ್ತವೆ.
ಆದ್ದರಿಂದ ಇನ್ನು ಮೇಲಾದರೂ ಸ್ಥಳಕ್ಕೆ ಪರಿಶೀಲನೆ ಮಾಡಿ ಕಾಮಗಾರಿ ಪ್ರಾರಂಭ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ದಂಡಾಧಿಕಾರಿಗಳಾದ ಸಿದ್ದರಾಯ ಭೋಸಗಿ ಈ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭಿಸಬೇಕು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರಮೇಶ್ ಬಾಬು , ರಾಜು ತಳವಾರ. ಬಿಜೆಪಿ ಪುರಸಭೆ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.