ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇಂದು ಒಣ ಹವೆಯ ಮುನ್ಸೂಚನೆ

ಬೆಂಗಳೂರು, ಮಾರ್ಚ್​ 23: ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿತ್ತು. ಆದರೆ ಇಂದು ಮತ್ತೊಮ್ಮೆ ರಾಜ್ಯದೆಲ್ಲೆಡೆ ಶುಷ್ಕ (Weather Forecast) ವಾತಾವರಣ ಆವರಿಸಿದೆ. ಇನ್ನೂ ಎರಡು ದಿನ ಇದೇ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯಾಗಬಹುದೆಂಬ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *