ಕುಮಾರಸ್ವಾಮಿಯನ್ನು CM ಮಾಡುವುದೇ ನನ್ನ ಗುರಿ: JDs ಸೇರ್ಪಡೆಯಾದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿಕೆ
ಬೆಂಗಳೂರು: ಪುಲಕೇಶಿ ನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾದರು.
ಭಾನುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀನಿವಾಸಮೂರ್ತಿ ಮತ್ತು ಅವರ ಕುಟುಂಬದವರು ಭಾಗಿಯಾಗಿದ್ದರು. ಶ್ರೀನಿವಾಸಮೂರ್ತಿ ಮತ್ತು ಅವರ ಬೆಂಬಲಿಗರು ಜೆಡಿಎಸ್ ಬಾವುಟವನ್ನು ಹಿಡಿದು ಪಕ್ಷ ಸೇರಿದರು.
ಪಕ್ಷ ಸೇರ್ಪಡೆಯ ನಂತರ ಮಾತನಾಡಿದ ಶ್ರೀನಿವಾಸಮೂರ್ತಿ, ‘ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನನ್ನ ಗುರಿ. ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸುತ್ತೇನೆ’ ಎಂದರು.2013ರಲ್ಲಿ ಜೆಡಿಎಸ್ ಟಿಕೆಟ್‌ನಿಂದ ಪುಲಕೇಶಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ, ವಿಧಾನಸಭೆ ಪ್ರವೇಶಿಸಿದ್ದರು. ನಂತರ 2018ರಲ್ಲಿ
ಕಾಂಗ್ರೆಸ್ ಟಿಕೆಟ್‌ನಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿದ್ದರು. 2020ರಲ್ಲಿ ನಡೆದಿದ್ದ ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ಕಾರಣ 2023ರ ಚುನಾವಣೆಯಲ್ಲಿ ಅವರಿಗೆ ಪ್ರಮುಖ ಪಕ್ಷಗಳ ಟಿಕೆಟ್ ಕೈತಪ್ಪಿತು
