ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕನಿಗೆ 10 ವರ್ಷ ಕಠಿಣ ಶಿಕ್ಷೆ

ಮೈಸೂರು: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಮೈಸೂರಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಎಚ್‌.ಡಿ.ಕೋಟೆ ತಾಲೂಕು ಮಚ್ಚರೆ ನಿವಾಸಿ ಮಹದೇವ ಶಿಕ್ಷೆಗೊಳಗಾದವನು. 2016ರ ಸೆ.17ರಂದು ಸಂಜೆ 4.30ರ ವೇಳೆ ಬಾಲಕಿ, ಸಹೋದರನೊಂದಿಗೆ ಆಟವಾಡುತ್ತಾ ಆರೋಪಿ ಮಹದೇವನ ಮನೆ ಬಳಿಗೆ ಹೋಗಿದ್ದಾಳೆ. ಈ ವೇಳೆ ಮಹದೇವ, ಬಾಲಕಿಯ ಅಣ್ಣನಿಗೆ ಮೊಬೈಲ್‌ ನೀಡಿ ಆಟವಾಡಿಕೊಳ್ಳುವಂತೆ ಹೇಳಿ ಕಳುಹಿಸಿದ್ದಾನೆ. ನಂತರದಲ್ಲಿ ತಿನ್ನಲು ತಿಂಡಿ ಕೊಡುವುದಾಗಿ ಬಾಲಕಿಯನ್ನು ಪುಸಲಾಯಿಸಿ ಮನೆಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು.

ಈ ಸಂಬಂಧ ಬಾಲಕಿ ಪೋಷಕರು ಆರೋಪಿ ವಿರುದ್ಧ ಬೀಚನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಆರೋಪಿ ವಿರುದ್ಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎಸ್‌.ಜಯಶ್ರೀ ಅವರು ಆರೋಪಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದ್ದಾರೆ.

ದಂಡ ಪಾವತಿಸಲು ತಪ್ಪಿದ್ದಲ್ಲಿ6 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ನೊಂದ ಬಾಲಕಿಯು 5 ಲಕ್ಷ ರೂ. ಪರಿಹಾರ ಪಡೆದುಕೊಳ್ಳಲು ನ್ಯಾಯಾಲಯ ಆದೇಶಿಸಿದೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಶಿವರುದ್ರಸ್ವಾಮಿ ಮತ್ತು ಎಂ.ಎಸ್‌.ಮಂಜುಳಾ ವಾದಿಸಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *