ಕಲಬುರಗಿ; ಹೊಸ ನೀರಿನ ಸಂಪರ್ಕಕ್ಕೆ ಆನ್ಲೈನ್ನಲ್ಲಿ ಅರ್ಜಿ ಹಾಕಿ
ಕಲಬುರಗಿ, ನವೆಂಬರ್ 19 : ಕಲಬುರಗಿ ನಗರದ ಜನರು ಹೊಸದಾಗಿ ನೀರು ಸರಬರಾಜು ಹಾಗೂ ಒಳ ಚರಂಡಿ ಸಂಪರ್ಕ ಪಡೆಯಲು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿಯೇ ವಿಶೇಷ ಆನ್ಲೈನ್ ತಂತ್ರಾಂಶವನ್ನು ಜಾರಿಗೆ ತರಲಾಗಿದೆ. ಕರ್ನಾಟಕ ಸರ್ಕಾರದ ಸೂಚನೆಯಂತೆ ಹೊಸ ಸಂಪರ್ಕ ಪಡೆಯಲು ಆನ್ಲೈನ್ ಮೂಲಕ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ‘ಜಲನಿಧಿ’ ಎಂಬ ವೆಬ್ ಸೈಟ್ ಆರಂಭಿಸಲಾಗಿದೆ. ಅಗತ್ಯ ಮಾಹಿತಿಗಳು ಅಲ್ಲಿ ಲಭ್ಯವಿದೆ.
ನಗರದ ಜನರು ಹೊಸದಾಗಿ ನೀರು ಸರಬರಾಜು ಹಾಗೂ ಒಳ ಚರಂಡಿ ಸೇವೆಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ನೀರು ಸರಬರಾಜು ನಿರ್ವಹಣೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಹೇಳಿದ್ದಾರೆ.
ಜನರು ವೆಬ್ ಸೈಟ್ಗೆ ಭೇಟಿ ನೀಡಿ ಹೊಸ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿ, ಸೂಕ್ತ ದಾಖಲಾತಿಗಳನ್ನು ಅಪ್ ಲೋಡ್ ಮಾಡಬೇಕು. ಅವುಗಳನ್ನು ಪರಿಶೀಲನೆ ನಡೆಸಿದ ಬಳಿಕ ಸಂಪರ್ಕ ನೀಡಲಾಗುತ್ತದೆ.
ಕಲಬುರಗಿ ನಗರದ ಜನರು ಹೊಸ ವ್ಯವಸ್ಥೆ ಜಾರಿಗೊಳಿಸಲು ಜಲಮಂಡಳಿಯೊಂದಿಗೆ ಸಹಕರಿಸಬೇಕು. ಅನಗತ್ಯವಾಗಿ ಕಚೇರಿಗೆ ಅಲೆದಾಡುವ ಬದಲು ಈ ಸೇವೆ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ. ಜನರು ಹೊಸ ನೀರಿನ ಸಂಪರ್ಕಕ ಪಡೆಯಲು ವೆಬ್ ಸೈಟ್ ವಿಳಾಸಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ