ಆರ್ಯ ಈಡಿಗ ಸಮುದಾಯ ಅಭಿವೃದ್ಧಿ ನಿಗಮ ರಚನೆಗೆ ಗುತ್ತೇದಾರ್ ಒತ್ತಾಯ!
ರಾಜ್ಯದಲ್ಲಿ ಮರಾಠ ಮತ್ತು ಲಿಂಗಾಯುತ ಅಭಿವೃದ್ಧಿ ನಿಗಮ ಸ್ಥಾಪನೆ ಕಾರ್ಯ ಆಯ್ತು. ಇದೀಗ ಆರ್ಯ ಈಡಿಗ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯಾ ಗುತ್ತೇದಾರ್ ಸಿಎಂ ಬಿಎಸ್ವೈ ಅವರಿಗೆ ಒತ್ತಾಯಿಸಿದ್ದಾರೆ. ಈಡಿಗ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು, ಅದನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಕಲಬುರಗಿ: ಆರ್ಯ ಈಡಿಗ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಅವರು ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಗುತ್ತೇದಾರ್, ಮರಾಠ – ಲಿಂಗಾಯುತ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸಂತೋಷದ ವಿಚಾರ. ಅದರಂತೆ ಈಡಿಗ ಸಮುದಾಯಕ್ಕೂ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಈಡಿಗ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಸಮುದಾಯವಾಗಿದೆ.
ಹಾಗಾಗಿ ಸಮಾಜದ ಅಭಿವೃದ್ಧಿಗೆ ನಾರಾಯಣ ಗುರುಗಳ ಹೆಸರಿನ ಮೇಲೆ ಪ್ರತ್ಯೇಕ ನಿಗಮ ಸ್ಥಾಪಿಸಿ 400 ಕೋಟಿ ರೂಪಾಯಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರಿಗೆ ಮಾಲೀಕಯ್ಯ ಗುತ್ತೇದಾರ್ ಆಗ್ರಹಿಸಿದ್ದಾರೆ.