Grama Panchayath Election Results: ಗ್ರಾ.ಪಂ ಚುನಾವಣೆಯಲ್ಲಿ ಶೇ 85 ರಿಂದ 90 ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ; ಬಿ.ಎಸ್.​ ಯಡಿಯೂರಪ್ಪ

ಡಿಸೆಂಬರ್ 22 ರಂದು ಮೊದಲ ಹಂತದಲ್ಲಿ 43,238 ಸ್ಥಾನಗಳಿಗೆ ಚುನಾವಣೆ ನಡೆದರೆ, ಎರಡನೇ ಹಂತದಲ್ಲಿ 39,378 ಸ್ಥಾನಗಳಿಗೆ ಮತದಾನ ಡಿಸೆಂಬರ್ 27 ರಂದು ನಡೆಯಿತು. ಒಟ್ಟು 2,22,814 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬೆಂಗಳೂರು (ಡಿಸೆಂಬರ್​ 30); ಕರ್ನಾಟದಲ್ಲಿ ಎರಡು ಹಂತದಲ್ಲಿ ನಡೆದಿದ್ದ 5728 ಗ್ರಾಮ ಪಂಚಾಯತ್ ಚುನಾವಣೆಗಳ ಮತ ಎಣಿಕೆ ಆರಂಭವಾಗಿದೆ. ಎಲ್ಲಾ ಪಕ್ಷಗಳೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸದಲ್ಲಿವೆ. ಈ ನಡುವೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, “ನನಗೆ ದೊರಕಿರುವ ಮಾಹಿತಿಯ ಪ್ರಕಾರ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ 85 ರಿಂದ 90 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ” ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗದ ನಡುವೆ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ ಕರ್ನಾಟಕದಲ್ಲಿ ಗ್ರಾಮ ಪಂಚಾಯತ್​ ಚುನಾವಣೆ ನಡೆಸಲಾಗಿತ್ತು. ಈ ಚುನಾವಣೆ ಫಲಿತಾಂಶ ಮುಂದಿನ ದಿನಗಳಲ್ಲಿ ಯಾವುದೇ ಪಕ್ಷದ ಬೆಳವಣಿಗೆಗೆ ಪ್ರಮುಖ ಪಾತ್ರವಹಿಸಲಿದೆ ಎಂದೇ ಬಿಂಬಿಸಲಾಗಿದೆ. ಈ ನಡುವೆ ಸಿಎಂ ಬಿ.ಎಸ್.​ ಯಡಿಯೂರಪ್ಪ ಹೀಗೊಂದು ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.  

ಪ್ರಸ್ತುತ ಮಾಹಿತಿಯ ಪ್ರಕಾರ ಕರ್ನಾಟಕದ 5,728 ಗ್ರಾಮ ಪಂಚಾಯಿತಿಗಳಿಗೆ ಮತ ಎಣಿಕೆ ಪ್ರಾರಂಭವಾಗಿದೆ. ಇವಿಎಂಗಳನ್ನು ಬಳಸಿದ ಬೀದರ್ ಜಿಲ್ಲೆಯನ್ನು ಹೊರತುಪಡಿಸಿ ಮತದಾನದಲ್ಲಿ ಮತಪತ್ರಗಳನ್ನು ಬಳಸಲಾಗಿದ್ದರಿಂದ, ಫಲಿತಾಂಶಗಳ ಪ್ರಕಟಣೆ ವಿಳಂಬವಾಗಬಹುದು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ 226 ಟಾಕಸ್‌ನ 5,728 ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 91,339 ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದ್ದು, ಈ ಪೈಕಿ 8,074 ಸ್ಥಾನಗಳಿಗೆ ಅವಿರೋಧವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್ 22 ರಂದು ಮೊದಲ ಹಂತದಲ್ಲಿ 43,238 ಸ್ಥಾನಗಳಿಗೆ ಚುನಾವಣೆ ನಡೆದರೆ, ಎರಡನೇ ಹಂತದಲ್ಲಿ 39,378 ಸ್ಥಾನಗಳಿಗೆ ಮತದಾನ ಡಿಸೆಂಬರ್ 27 ರಂದು ನಡೆಯಿತು. ಒಟ್ಟು 2,22,814 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಮತ ಎಣಿಕೆ ನಡೆಯುತ್ತಿರುವ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್​ ಭದ್ರತೆ ನೀಡಲಾಗಿದೆ. ಸಂಭ್ರಮಾಚರಣೆಗಳಿಗೆ ಕೊರೋನಾ ಕಾರಣಕ್ಕಾಗಿ ಬ್ರೇಕ್ ಹಾಕಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಮಧ್ಯಪಾನ ಮಾರಾಟಕ್ಕೂ ನಿಷೇಧ ವಿಧಿಸಲಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *