Bird Flu: ಮೊಟ್ಟೆ, ಮಾಂಸ ಮಾರಾಟಕ್ಕೆ ನಿರ್ಬಂಧವಿಲ್ಲ; ಹಕ್ಕಿಜ್ವರದ ಆತಂಕ ಬೇಡ ಎಂದ ಸಚಿವ ಪ್ರಭು ಚವ್ಹಾಣ್​

ಬೆಂಗಳೂರು (ಜ. 8): ನೆರೆಯ ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ  ಹಕ್ಕಿ ಜ್ವರ ಆತಂಕ ಮೂಡಿಸಿದೆ. ಈ ಹಿನ್ನಲೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕೂಡ ಎಚ್ಚರಿಕೆ ವಹಿಸಲಅಗಿದ್ದು, ಜಿಲ್ಲಾಧಿಕಾರಿಗಳು ಈ ಬಗ್ಗೆ ನಿಗಾವಹಿಸುವಂತೆ ತಿಳಿಸಲಾಗಿದೆ. ಅಲ್ಲದೇ ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣಗಳು ಕಂಡು ಬಂದಿಲ್ಲ. ಅಲ್ಲದೇ, ರಾಜ್ಯದಲ್ಲಿ ಕೋಳಿ ಮೊಟ್ಟೆ, ಮಾಂಸ ಮಾರಾಟಕ್ಕೂ ಯಾವುದೇ ನಿರ್ಬಂಧವಿಧಿಸಿಲ್ಲ ಎಂದು ಪಶಸಂಗೋಪನೆ ಸಚಿವ ಪ್ರಭು ಚವ್ಹಾಣ್​ ತಿಳಿಸಿದರು. ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಈ ಕುರಿತು ವಿಡಿಯೋ ಕಾನ್ಫರೆನ್ಸ್​ ಮೂಲಕ ಉನ್ನತ ಮಟ್ಟದ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ಆತಂಕ ಪಡದೆ ಮೊಟ್ಟೆ ಮತ್ತು ಮಾಂಸವನ್ನು ಸೇವಿಸಬಹುದಾಗಿದೆ. ಕೇರಳ ರಾಜ್ಯ ಹೊರತುಪಡಿಸಿ ಇತರೆ ರಾಜ್ಯಗಳ ಕೋಳಿ ಮತ್ತು ಕೋಳಿ ಉತ್ಪನ್ನಗಳ ಮಾರಾಟ ಹಾಗೂ ಸಾಗಾಣಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು. 

ಗಡಿ ಭಾಗದಲ್ಲಿ ಹೈ ಆಲರ್ಟ್​

ಕೇರಳ ರಾಜ್ಯದಿಂದ ಒಳಬರುವ ಕೋಳಿ ಉತ್ಪನ್ನಗಳ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿರ್ಭಂಧಿಸಲಾಗಿದೆ. ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳು ಹಾಗೂ ಇತರೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕೋಳಿ ಶೀತ ಜ್ವರದ ರೋಗೋದ್ರೇಕ ತಡೆಗಟ್ಟಲು, ರೋಗ ನಿಯಂತ್ರಣ ಸಮಿತಿ ಸಭೆಗಳನ್ನು ಜರುಗಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜೊತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ತಿಳಿಸಲಾಗಿದೆ. ಎಲ್ಲಾ ಕೋಳಿ ಫಾರಂಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರೋಗ ನಿಯಂತ್ರಣ ಔಷಧಿಗಳಿಂದ ಸ್ವಚ್ಛಗೊಳಿಸುವುದು ಮತ್ತು ಕನಿಷ್ಟ ಜೈವಿಕ ರಕ್ಷಣಾ ಪದ್ದತಿಗಳನ್ನು ಅಳವಡಿಕೊಳ್ಳುವಂತೆ ತೀರ್ಮಾನಿಸಿ ಕ್ರಮವಹಿಸುವಂತೆ ತಿಳಿಸಲಾಗಿದೆ.

ಕೇರಳ ರಾಜ್ಯದ ಗಡಿ ಭಾಗದ ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಕಾಡು ಹಕ್ಕಿಗಳು, ನೀರು ಹಕ್ಕಿಗಳು, ವಲಸೆ ಹಕ್ಕಿಗಳು, ಬಾತುಕೋಳಿಗಳು, ಗೀಜಗದ ಹಕ್ಕಿಗಳು ಇತ್ಯಾದಿ ವಿವಿಧ ಪ್ರಭೇದದ ಹಕ್ಕಿಗಳ ಅಸಹಜ ಸಾವು ಅಥವಾ ಹಕ್ಕಿ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಗಮನಹರಿಸಿ ಕ್ರಮಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಅವಶ್ಯವಿರುವ ಪರಿಕರಗಳು ಮತ್ತು ರೋಗ ನಿಯಂತ್ರಕ ರಾಸಾಯನಿಕಗಳನ್ನು ಕ್ರೂಢೀಕರಿಸಿ ಪರಿಸ್ಥಿತಿಯನ್ನು ನಿಭಾಯಿಸಲು ಸನ್ನಧರಾಗಲು ಸೂಚನೆ ನೀಡಲಾಗಿದೆ.

ಪಕ್ಷಿಧಾಮ-ಪ್ರಾಣಿ ಸಂಗ್ರಹಾಲಯದಲ್ಲಿ ನಿಗಾಎಲ್ಲಾ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ ಹಾಗೂ ನೀರು ಸಂಗ್ರಹಣಾ ಸ್ಥಳಗಳ ಬಗ್ಗೆ ತೀರ್ವ ನಿಗಾವಹಿಸಲಾಗುವುದು.  ಕೋಳಿ ಅಥವಾ ವಲಸೆ ಹಕ್ಕಿಗಳು ವನ್ಯ ಪಕ್ಷಿಗಳ ಅಸ್ವಾಭಾವಿಕ ಮರಣ ಕಂಡುಬಂದಲ್ಲಿ ಈ ಬಗ್ಗೆ ತೀರ್ವ ನಿಗಾವಹಿಸಿ, ವರದಿಗಳನ್ನು ಸಲ್ಲಿಸಲು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಕೋಳಿ ಶೀತ ಜ್ವರದ ಸಂಭವನೀಯತೆಯನ್ನು ಪರಿಗಣಿಸಿ, ಸಂಬಂಧಪಟ್ಟ ಪ್ರಯೋಗಾಲಯಕ್ಕೆ ವರದಿ ಮಾಡಿ, ರೋಗ ವಿಶ್ಲೇಷಣೆ ನಡೆಸುವ ಬಗ್ಗೆ ಕ್ರಮ ವಹಿಸುವುದು ಹಾಗೂ ಜೈವಿಕ ಸುರಕ್ಷಾ ) ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *