ಮೊದಲ ಹಂತದಲ್ಲಿ ರಾಜ್ಯದಲ್ಲಿ 16 ಲಕ್ಷ ಕೊರೋನಾ ಯೋಧರಿಗೆ ಲಸಿಕೆ- ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು: ಮೊದಲ ಹಂತದಲ್ಲಿ ರಾಜ್ಯದಲ್ಲಿ 16 ಲಕ್ಷ ಕೊರೋನಾ ಯೋಧರಿಗೆ ಲಸಿಕೆ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ ಕುರಿತು ಮಾಹಿತಿ ನೀಡಿದರು.
ರಾಜ್ಯದಲ್ಲಿ 235 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತಿದ್ದು, ಮೊದಲ ಹಂತದಲ್ಲಿ ಜನವರಿ 16 ರಿಂದ 16 ಲಕ್ಷ ಕೊರೋನಾ ಯೋಧರಿಕೆ ಲಸಿಕೆ ನೀಡಲಾಗುವುದು ಎಂದರು.
ಲಸಿಕೆ ಶೇಖರಣೆಗೆ ಕೋಲ್ಡ್ ಸ್ಟೋರೇಜ್, ಹಂಚಿಕೆ, ವಿತರಣೆ, ನೀಡುವಿಕೆ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲಾ ಹಂತದಲ್ಲೂ ನಿಗಾ ವಹಿಸಲಾಗಿದೆ. ಹಂತ ಹಂತವಾಗಿ ಲಸಿಕೆ ವಿತರಿಸಲಾಗುವುದು, ಜನರು ಅಗತ್ಯ ಸಹಕಾರ ನೀಡಬೇಕೆಂದು ಮುಖ್ಯಮಂತ್ರಿ ಮನವಿ ಮಾಡಿದರು.