ಸಂಪುಟ ವಿಸ್ತರಣೆ: ಸಚಿವ ಸ್ಥಾನ ಕೈ ತಪ್ಪುವ ಆತಂಕ, ಬಿಎಸ್‌ವೈಯನ್ನು ಭೇಟಿ ಮಾಡಿದ ಹೆಚ್. ನಾಗೇಶ್
ಬೆಂಗಳೂರು: ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದೆ. ಸಂಪುಟದಿಂದ ಅಬಕಾರಿ ಸಚಿವ ಹೆಚ್. ನಾಗೇಶ್ ಅವರನ್ನು ಕೈಬಿಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಮಂಗಳವಾರ ಅವರು ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಿಎಂ ನಿವಾಸ ಕಾವೇರಿಗೆ ತೆರಳಿದ ಹೆಚ್ ನಾಗೇಶ್ ಅವರು ಬಿಎಸ್‌ವೈ ಜೊತೆಗೆ ಕೆಲಹೊತ್ತು ಮಾತುಕತೆ ನಡೆಸಿದರು. ಮಾತುಕತೆಯ ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.