ನಾಚಿಕೆಯಿಲ್ಲದ ಕಾಂಗ್ರೆಸ್ನಿಂದ ‘ರಾಜಭವನ ಚಲೋ’ ನಾಟಕ : ಬಿಜೆಪಿ ವ್ಯಂಗ್ಯ
ಬೆಂಗಳೂರು,ಜ.20-ಕೇಂದ್ರದ ಕೃಷಿ ಕಾಯ್ದೆ ತಿದ್ದುಪಡಿ ವಿರೋಸಿ ಪ್ರತಿಪಕ್ಷ ಕಾಂಗ್ರೆಸ್ ಇಂದು ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿರುವುದಕ್ಕೆ ಬಿಜೆಪಿ ತಿರುಗೇಟು ನೀಡಿದೆ.
ಈ ಸಂಬಂಧ ಟ್ವಿಟ್ ಮಾಡಿರುವ ಬಿಜೆಪಿ 3800 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಅವರ ಕಣ್ಣೀರು ಒರೆಸುವ ಬದಲು ಟಿಪ್ಪು ಜಯಂತಿ ಆಚರಣೆಯಲ್ಲಿ ನಿರತರಾಗಿದ್ದಿರಿ.ಈಗ ರಾಜಭವನ ಚಲೋ ಎಂಬ ನಾಟಕ, ಚೆನ್ನಾಗಿದೆ ಎಂದು ವ್ಯಂಗ್ಯವಾಡಿದೆ.
ಅಕಾರದುದ್ದಕ್ಕೂ ರೈತರ ಆತ್ಮಹತ್ಯೆಗಳಿಗೆ ಕಾರಣವಾದ ಕರ್ನಾಟಕ ಕಾಂಗ್ರೆಸ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದ ರೈತ ಪರ ಕಾಯ್ದೆಗಳಿಗೆ ನಾಟಕೀಯ ವಿರೋಧ ವ್ಯಕ್ತಪಡಿಸುತ್ತಿದ್ದೀರಿ ಎಂದು ಬಿಜೆಪಿ ಆಕ್ಷೇಪಿಸಿದೆ.ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರಲಿಲ್ಲ, ಅಲ್ಲವೇ ಎಂದು ಪ್ರಶ್ನಿಸಿದೆ.