ಈ ವರ್ಷದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮೋಟಾರ್ ಸೈಕಲ್ ಸ್ಟಂಟ್ ಗೆ ಬ್ರೇಕ್!

ನವದೆಹಲಿ: ಕೋವಿಡ್-19 ಕಾರಣದಿಂದಾಗಿ ಈ ಬಾರಿಯ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಹಲವು ಕಾರ್ಯಕ್ರಮಗಳನ್ನು ಕೈಬಿಡಲಾಗಿದೆ. ಪ್ರತಿ ವರ್ಷದಂದು ರಾಜಪಥ್ ನಲ್ಲಿ ನಡೆಯುತ್ತಿದ್ದ ಬೈಕ್ ಸ್ಟಂಟ್ (ಮೋಟಾರ್ ಸೈಕಲ್) ಗೆ ಈ ಬಾರಿ ಬ್ರೇಕ್ ಹಾಕಲಾಗಿದೆ.

ವೀಕ್ಷಕರ ಸಂಖ್ಯೆಯನ್ನು 25,000 ಕ್ಕೆ ನಿಗದಿಪಡಿಸಲಾಗಿದ್ದು, ಸಾಮಾಜಿಕ ಅಂತರ ನಿಯಮ ಪಾಲನೆ ಮಾಡಬೇಕಿರುವ ಹಿನ್ನೆಲೆಯಲ್ಲಿ ಶೌರ್ಯ ಪ್ರಶಸ್ತಿಗಳ ಪ್ರದಾನವೂ ಈ ಬಾರಿ ಸಾರ್ವಜನಿಕವಾಗಿ ನಡೆಯುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಷ್ಟೇ ಅಲ್ಲದೇ ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳೂ ಭಾಗಿಯಾಗುತ್ತಿಲ್ಲ. 2020 ರ ಸ್ವಾತಂತ್ರ್ಯ ದಿನಾಚರಣೆ ಮಾದರಿಯಲ್ಲೇ ಈ ಬಾರಿ ಸಾಮಾಜಿಕ ಅಂತರವನ್ನು ಪಾಲನೆ ಮಾಡಲಾಗುವುದು. ಆದ್ದರಿಂದ ಜನಸಂದಣಿಯ ಸಂಖ್ಯೆಯನ್ನು 25,000 ಕ್ಕೆ ಇಳಿಕೆ ಮಾಡಲಾಗಿದೆ. ಪ್ರತಿ ವರ್ಷ ಇದು 1.25 ಲಕ್ಷ ಜನರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದ್ದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿರುವ ಹಿನ್ನೆಲೆಯಲ್ಲಿ  ಗಣರಾಜ್ಯೋತ್ಸವದ ಮುಖ್ಯ ಆಕರ್ಷಣೆಯಾಗಿರುವ, ಸೇನೆ ಅಥವಾ ಅರೆಸೇನಾಪಡೆ ಸಿಬ್ಬಂದಿಗಳಿಂದ ನಡೆಯುತ್ತಿದ್ದ ಮೋಟಾರ್ ಸೈಕಲ್ ಸ್ಟಂಟ್ ಗಳನ್ನೂ ಈ ಬಾರಿ ಸ್ಥಗಿತಗೊಳಿಸಲಾಗಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳಿಗೂ ಈ ಬಾರಿ ನಿರ್ಬಂಧ ವಿಧಿಸಲಾಗಿದ್ದು, ಮಾರ್ಚಿಂಗ್ ತಂಡಗಳನ್ನೂ 144 ರಿಂದ 96 ಕ್ಕೆ ಇಳಿಕೆ ಮಾಡಲಾಗಿದೆ. ರಾಜ್ಯಗಳಿಂದ ಆಗಮಿಸುವ ಟ್ಯಾಬ್ಲೂ ತಂಡದವರು, ಸರ್ಕಾರಿ ಇಲಾಖೆಯ ಅಧಿಕಾರಿಗಳಿಗೆ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ.

ಈ ಬಾರಿ ಬಾಂಗ್ಲಾದೇಶ 50 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಭಾರತದ ಗಣರಾಜ್ಯೋತ್ಸವ ದಿನಾಚರಣೆಯಂದು ಬಾಂಗ್ಲಾದೇಶದ ಸೇನೆಯ ಬ್ಯಾಂಡ್ ಪರೇಡ್ ನಲ್ಲಿ ಭಾಗಿಯಾಗಲಿರುವುದು ವಿಶೇಷವಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *