ದುರ್ಘಟನೆ ಮರುಕಳುಹಿಸಲೆಂದೇ ಸಿಎಂ ಗಣಿಗಾರಿಕೆಯನ್ನು ಸಕ್ರಮ ಮಾಡ್ತಿದ್ದಾರೆ; ಎಚ್‌ಡಿಕೆ ಆರೋಪ

ಮದ್ದೂರು: ನಿರಂತರವಾಗಿ ಗಣಿಗಾರಿಕೆ ನಡೆಯಲು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.

ಪಟ್ಟಣದ ಮದ್ದೂರಮ್ಮ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗದೆ ಕೈಕಟ್ಟಿ ಕುಳಿತಿದ್ದು, ರಾಜ್ಯ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲುಗಣಿಗಾರಿಕೆ ವಿರುದ್ಧ ಸರಕಾರ ಅಗತ್ಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಕ್ರಮ ಕಲ್ಲುಗಣಿಗಾರಿಕೆಯನ್ನು ಸಕ್ರಮ ಮಾಡಿಕೊಡುವುದಾಗಿ ಹೇಳಿಕೆ ನೀಡಿರುವ ಸಂಬಂಧ ಪ್ರತಿಕ್ರಿಯಿಸಿದ ಅವರು ಇಂತಹ ದುರ್ಘಟನೆಗಳು ಮತ್ತೆ ಮತ್ತೆ ಮರುಕಳುಹಿಸಲೆಂದೇ ಸಕ್ರಮ ಮಾಡುತ್ತಿದ್ದಾರೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಶ್ನೆ ಪತ್ರಿಕೆ ಸೋರಿಕೆ, ಸರಕಾರ ವಿರುದ್ಧ ಟೀಕೆ
ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತ ಪತ್ರಕರ್ತರ ಪ್ರಶ್ನೆಗೆ, ರಾಜ್ಯಾದ್ಯಂತ ಹಲವಾರು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿರುವುದು ಸರಕಾರದ ಆಡಳಿತದ ವೈಖರಿ ಹೇಗಿದೆ ಎಂಬುದನ್ನು ತೋರಿಸುತ್ತದೆ. ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುವ ಪರಿಸ್ಥಿತಿ ಬಂದೊದಗಿದೆ ಎಂದರು.

 

ಡಿಸಿ ವಿರುದ್ಧ ಜೆಡಿಎಸ್‌ ಧರಣಿ ಎಚ್ಚರಿಕೆ
ಸರಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರದೆ ಜಿಲ್ಲಾಧಿಕಾರಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಇದನ್ನು ಖಂಡಿಸಿ ಜಿಲ್ಲೆಯ ಜೆಡಿಎಸ್‌ ಶಾಸಕರು ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ಧರಣಿಗೆ ಮುಂದಾಗಿದ್ದಾರೆ. ಕೂಡಲೇ ಸರಕಾರ ಆಡಳಿತ ವೈಫಲ್ಯವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು. ಶಾಸಕರಾದ ಡಿ.ಸಿ. ತಮ್ಮಣ್ಣ, ಅಪ್ಪಾಜಿಗೌಡ, ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು, ಪುರಸಭೆ ಸದಸ್ಯೆ ಬಿ.ಸಿ. ಸರ್ವಮಂಗಳಾ, ಮುಖಂಡರಾದ ರಮೇಶ್‌, ಕಾರ್ತಿಕ್‌ ಸಿದ್ದರಾಜು, ನಿತೀನ್‌ ಇತರರಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *