ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಕ್ಕಾದ ಅಪಮಾನಕ್ಕೆ ಇಡೀ ದೇಶ ಆಘಾತಕ್ಕೊಳಗಾಗಿದೆ: ಪ್ರಧಾನಿ ಮೋದಿ
ನವದೆಹಲಿ: ಈ ವರ್ಷದ ಮೊದಲ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತನಾಡುತ್ತಿದ್ದು, ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಕ್ಕಾದ ಅಪಮಾನಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
2021ರ ಮೊದಲ ತಿಂಗಳು ಮುಗಿಯುತ್ತಿದೆ. ಈ ತಿಂಗಳಿನಲ್ಲಿ ನಾವು ಹಲವು ಹಬ್ಬಗಳನ್ನು ಆಚರಿಸಿದ್ದೇವೆ. ಜನವರಿ 26ರ ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜದ ಅಪಮಾನಕ್ಕೆ ಸಾಕ್ಷಿಯಾದ ಇಡೀ ದೇಶ ಆಘಾತಕ್ಕೊಳಗಾಗಿದೆ ಎಂದು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ. ಅಂದು ನಡೆದ ಘಟನೆಯಿಂದ ಬೇಸರವಾಗಿದೆ. ಇಡೀ ದೇಶಕ್ಕೆ ದುಷ್ಟಶಕ್ತಿಗಳಿಂದ ಅವಮಾನವಾಗಿದೆ ಎಂದು ಭಾಷಣದ ಆರಂಭದಲ್ಲಿಯೇ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಸಂಭವಿಸಿದ ಘಟನೆಯನ್ನು ಸ್ಮರಿಸಿ ಖಂಡಿಸಿದರು.