‘ಹಗಲಲ್ಲಿ ಶ್ರೀರಾಮನ ಹೆಸರೇಳಿ ಸಂಗ್ರಹಿಸುವ ಹಣದಲ್ಲಿ ಬಿಜೆಪಿ ನಾಯಕರು ರಾತ್ರಿ ಹೊತ್ತು ಮದ್ಯಕುಡಿಯುತ್ತಾರೆ’

ಭೋಪಾಲ್​: ಬಿಜೆಪಿ ನಾಯಕರು ಅಯೋಧ್ಯೆ ಶ್ರೀರಾಮ ಮಂದಿರದ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ, ಆ ಹಣದಲ್ಲಿ ಮದ್ಯ ಖರೀದಿ ಮಾಡಿ ಕುಡಿಯುತ್ತಿದ್ದಾರೆ ಎಂದು  ಹೇಳುವ ಮೂಲಕ ಮಧ್ಯಪ್ರದೇಶದ ಜಬುವಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕಾಂತಿಲಾಲ್  ಭುರಿಯಾ ವಿವಾದ ಸೃಷ್ಟಿಸಿದ್ದಾರೆ.

ಬಿಜೆಪಿ ನಾಯಕರು ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ  ಕೋಟಿ ಕೋಟಿ ರೂಪಾಯಿ ಸಂಗ್ರಹ ಮಾಡಿದ್ದಾರೆ. ಆ ಹಣವೆಲ್ಲ ಎಲ್ಲಿ ಹೋಯಿತು? ಈ ನಾಯಕರು ಬೇರೇನೂ ಮಾಡುತ್ತಿಲ್ಲ. ಬೆಳಗ್ಗೆಯೆಲ್ಲ ಹಣ ಸಂಗ್ರಹ ಮಾಡಿ, ಅಂದೇ ರಾತ್ರಿ ಮದ್ಯ ಸೇವನೆ ಮಾಡುತ್ತಿದ್ದಾರೆ. ಈ ಮೂಲಕ ಹಣವನ್ನು ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರಾದ್ಯಂತ ಸುತ್ತುವರಿದು ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುವ ಜವಾಬ್ದಾರಿಯನ್ನು ಆರ್​ಎಸ್​ಎಸ್​, ವಿಶ್ವ ಹಿಂದೂ ಪರಿಷತ್​ ಸೇರಿ ಹಲವು ವಿಶ್ವಾಸಾರ್ಹ ಸಂಘಟನೆಗಳಿಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ವಹಿಸಿದೆ. ಇದೀಗ ಇವರ ಕೆಲಸದ ಬಗ್ಗೆ ಕಾಂಗ್ರೆಸ್ ಶಾಸಕ ಅನುಮಾನ ವ್ಯಕ್ತಪಡಿಸಿದ್ದಾರೆ. ಎಲ್ಲವನ್ನೂ ಮದ್ಯಕ್ಕಾಗಿಯೇ ಖಾಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಅಂದು ಸಂಗ್ರಹ ಮಾಡಿದ ಹಣವೆಲ್ಲ ಅಂದೇ ಶ್ರೀರಾಮ ಮಂದಿರದ ಬ್ಯಾಂಕ್​ ಅಕೌಂಟ್​ಗೆ ಹೋಗುತ್ತಿದೆ ಎಂದು ಸ್ಪೀಕರ್​ ರಾಮೇಶ್ವರ್​ ಶರ್ಮಾ ಸ್ಪಷ್ಟನೆ ನೀಡಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *