ಇಂದು ಮಡಿಕೇರಿಗೆ ರಾಷ್ಟ್ರಪತಿ Ramnath Kovind, ತಲಕಾವೇರಿಯಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷಿದ್ಧ

ಮಡಿಕೇರಿ: ಇಂದು ಮಡಿಕೇರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ (President Ramnath Kovind) ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ತಲಕಾವೇರಿ, ಮಡಿಕೇರಿಯಲ್ಲಿ ನವ ವಧುವಿನಂತೆ ಅಲಂಕಾರಗೊಂಡಿದ್ದು ತಲಕಾವೇರಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಇಂದು ತಲಕಾವೇರಿಗೆ  (Talacauvery) ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಭಾಗಮಂಡಲದಿಂದ ತಲಕಾವೇರಿವರೆಗೆ 8 ಕಿ.ಮೀ. ಅಂತರದಲ್ಲಿ ಭಾರೀ ಸಂಖ್ಯೆಯಲ್ಲಿ ಪೊಲೀಸರ‌ನ್ನು ನಿಯೋಜಿಸಲಾಗಿದೆ.

ಇಂದು ಬೆಳಗ್ಗೆ ಭಾಗಮಂಡಲದ ಕಾವೇರಿ ಕಾಲೇಜಿನಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ಗೆ ಆಗಮಿಸಲಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್‌ (Ramnath Kovind) ಅಲ್ಲಿಂದ ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.

ಅಲ್ಲಿಂದ ಮಡಿಕೇರಿ (Madikeri)ಯಲ್ಲಿ ಸರ್ಕಾರದ ವತಿಯಿಂದ ಅಭಿವೃದ್ಧಿಪಡಿಸಲಾಗಿರುವ ಜನರಲ್‌ ತಿಮ್ಮಯ್ಯ ಸ್ಮಾರಕ ಭವನ, ವಸ್ತು ಸಂಗ್ರಹಾಲಯವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್  ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರತೀಯ ಸೇನಾ ಮುಖ್ಯಸ್ಥರಾದ ಬಿಪಿನ್‌ ರಾವತ್‌ ಅವರೂ ಕೂಡ ಉಪಸ್ಥಿತರಿರಲಿದ್ದಾರೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಮಾಹಿತಿ ನೀಡಿದ್ದಾರೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *