ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜನಪ್ರತಿನಿಧಿಗಳು ಹಳ್ಳಿಗಳ ಧ್ವನಿಯಾಗಬೇಕು: ಸಚಿವ ಕೆ.ಎಸ್.ಈಶ್ವರಪ್ಪ ಅಭಿಮತ

ಬೇಸಿಗೆ ಸಮೀಪಿಸುತ್ತಿದ್ದು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವವುಂಟಾಗದಂತೆ ನೀರಿನ ಸೌಕರ್ಯ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು, ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳು ಜನರ ಸಮಸ್ಯೆ ನೀಗಿಸುವಲ್ಲಿ ಹಳ್ಳಿಗಳ ಧನಿಯಾಗಿ ಕೆಲಸ ಮಾಡಬೇಕು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯನ್ನು ಸಸಿಗೆ ನೀರು ಎರೆಯುವ ಮೂಲಕ ಆರಂಭಿಸಿ ಮಾತನಾಡಿದ ಅವರು, ಜನಪ್ರತಿನಿಧಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಕುಡಿಯುವ ನೀರಿನ ಅಭಾವವಾಗದಂತೆ ಯಾವ್ಯಾವ ಹಳ್ಳಿಗಳಲ್ಲಿ ನೀರಿನ ಸೌಲಭ್ಯವಿಲ್ಲವೋ ಎಂದು ಪರಿಶೀಲಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ‘ಜಲ ಜೀವನ ಮಿಷನ್’ ಅಡಿ ಪ್ರತಿ ಗ್ರಾಮಗಳ ಮನೆ-ಮನೆಗೆ ಕಡ್ಡಾಯವಾಗಿ ನೀರಿನ ಸೌಲಭ್ಯ ಒದಗಿಸಬೇಕು. ಯೋಜನೆ ಸಮರ್ಪಕವಾಗಿ ಸದ್ಭಳೆಕೆಯಾಗಬೇಕು. ಅಲ್ಲದೇ, ಮಾರ್ಚ್ ಮಾಹೆ ಮುಗಿಯುವಷ್ಟರಲ್ಲಿ ಯೋಜನಾ ವಿಸ್ತøತ ವರದಿ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಸಾಸಿ ಅವರಿಗೆ ಸೂಚಿಸಿದರು.

‘ಜಲ ಜೀವನ ಮಿಷನ್’ ಕುರಿತು ಈವರೆಗಿನ ಯೋಜನಾ ವಿಸ್ತøತ ವರದಿ ಬಗ್ಗೆ ಸಭೆಗೆ ಅಂಕಿ-ಅಂಶಗಳನ್ನು ನೀಡಿದ ದಿಲೀಷ್ ಸಾಸಿ ಅವರು, 16.02.2021ರವರೆಗೆ ಒಟ್ಟು 380 ಡಿಪಿಆರ್ ವರದಿ, 378 ಸಿದ್ದಪಡಿಸಲಾಗಿದೆ ಹಾಗೂ 350 ಡಿಪಿಆರ್ ಅಂತಿಮ ವರದಿಯಾಗಿವೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಈಶ್ವರಪ್ಪ ಅವರು, ಮುಂಬರುವ ಮಾರ್ಚ್ ಕೊನೆವಾರದಲ್ಲಿ ಯೋಜನ ವಿಸ್ತøತ ವರದಿ ಪೂರ್ಣಗೊಳಿಸುವಂತೆ ತಿಳಿಸಿದರು.
ಗ್ರಾಮೀಣ ಭಾಗದ ಯಾವ್ಯಾವ ಶಾಲೆ, ಅಂಗನವಾಡಿಗಳಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಮುಂತಾದ ಮೂಲ ಸೌಕರ್ಯಗಳ ಸಮಸ್ಯೆಗಳಿವೆ ಎಂಬುವುದರ ಕುರಿತು ಪಟ್ಟಿ ಮಾಡಿ ಮಾಹಿತಿ ಸಂಗ್ರಹಿಸುವುದರ ಜತೆಗೆ ಸಮಸ್ಯೆ ನಿವಾರಿಸಬೇಕು. ಕೆಲ ಶಾಲೆಗಳಲ್ಲಿ ಶೌಚಾಲಯಗಳಿದ್ದರೆ, ನೀರಿನ ಸೌಲಭ್ಯವಿರಲ್ಲ, ನೀರಿನ ಸೌಲಭ್ಯವಿದ್ದರೆ ಶೌಚಾಲಯಗಳಿರಲ್ಲ. ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆ ತಲೆದೋರದಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕು. ನಿರ್ಲಕ್ಷ್ಯವಹಿಸಿದರೆ ಅಂತವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದರು.

ಗ್ರಾಮೀಣ ಭಾಗದ ಹಲವೆಡೆ ನೀರಿನ ಮೂಲಗಳು ಇಲ್ಲದÀ ಕಡೆ ನೀರಿನ ಪೈಪ್‍ಲೈನ್ ಅಳವಡಿಸಿ, ಅನಗತ್ಯ ದುಂದುವೆಚ್ಚ ಮಾಡಿರುವ ಬಗ್ಗೆ ದೂರು ಬಂದಿರುವುದಾಗಿ ಉಲ್ಲೇಖಿಸಿದ ಸಚಿವರು, ಈ ಕುರಿತು ಒಂದು ಪಟ್ಟಿ ತಯಾರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆಯ 2021ನೇ ವರ್ಷದ ಕ್ಯಾಲೆಂಡರನ್ನು ಬಿಡುಗಡೆ ಮಾಡಲಾಯಿತು. ಇದಕ್ಕೂ ಮೊದಲು ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪ್ರತಿಜ್ಞಾವಿಧಿ ಭೋದಿಸಲಾಯಿತು.

ಕಲ್ಯಾಣಿಗಳ ಪಟ್ಟಿ ತಯಾರಿಸಲು ಸೂಚನೆ: ನರೇಗಾ ಉದ್ಯೋಗ ಖಾತರಿ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಕಲಬುರಗಿ ಜಿಲ್ಲೆಯಲ್ಲೇ ಅತೀ ಹೆಚ್ಚು ಜಾಬ್ ಕಾರ್ಡ್‍ಗಳನ್ನು ವಿತರಿಸಲಾಗಿದೆ ಎಂದರು. ಹಲವು ದೇಗುಲಗಳ ಬಳಿ ಪುರಾತನ ಕಲ್ಯಾಣಿಗಳು ಮುಚ್ಚಿ ಹೋಗಿರುತ್ತವೆ. ಈವರೆಗೆ ಈ ಯೋಜನೆ ಮೂಲಕ ಎಷ್ಟು ಕಲ್ಯಾಣಿಗಳನ್ನು ಪುನಃಶ್ಚೇತನಗೊಳಿಸಲಾಗಿದೆ ಎಂಬ ಪಟ್ಟಿಯನ್ನು ತಯಾರಿಸುವಂತೆ. ಮುಚ್ಚಿ ಹೋಗಿರುವ ಕಲ್ಯಾಣಿಗಳನ್ನು ಪುನಃಶ್ಚೇತನಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಸಭೆಯಲ್ಲಿ ಶಾಸಕ ಹಾಗೂ ಕಲ್ಯಾಣ ಕಾರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ ರೇವೂರ, ಶಾಸಕ ಹಾಗೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮಡು, ಸುಭಾಷ ಆರ್ ಗುತ್ತೇದಾರ, ಡಾ.ಅವಿನಾಶ ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತ ಅನಿರುದ್ಧ ಶ್ರವಣ್ ಪಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಯರಾಮ, ಮುಖ್ಯ ಅಭಿಯಂತರಾದ ಹೊಳಿಯಾಚಿ ಪರಸಪ್ಪ ಬಸಪ್ಪ, ಮಹಮ್ಮದ್ ಅಜೀಜುದ್ದೀನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *