ಚಿಕ್ಕಬಳ್ಳಾಪುರ ದುರಂತಕ್ಕೆ ಪ್ರಧಾನಿ ಮೋದಿ ಆಘಾತ…! ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಮೋದಿ…!
ಜಿಲೆಟಿನ್ ಸ್ಫೋಟಗೊಂಡು ಆರು ಜನ ಸಾವನ್ನಪ್ಪಿರುವ ಘಟನೆ, ಚಿಕ್ಕಬಳ್ಳಾಪುರ ತಾಲೂಕು ಹೀರೆನಾಗವೇಲಿ ಹತ್ತಿರದ ಕಲ್ಲು ಕ್ವಾರಿ ಬಳಿ ನಡೆದಿದೆ. ಇಂಜಿನಿಯರ್, ಕಂಪ್ಯೂಟರ್ ಆಪರೇಟರ್, ವಾಚ್ಮ್ಯಾನ್, ಅಕೌಂಟೆಂಟ್ ಸೇರಿದಂತೆ ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾತ್ರಿ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಈ ಕ್ರಷರ್ ಗುಡಿಬಂಡೆಯ ಬಿಜೆಪಿ ಮುಖಂಡ ನಾಗರಾಜ್ ರೆಡ್ಡಿ, ಆಂಧ್ರ ಪ್ರದೇಶದ ರಾಘವೇಂದ್ರ ರೆಡ್ಡಿ, ಶಿವಾರೆಡ್ಡಿ ಮಾಲೀಕತ್ವದ ಕ್ರಷರ್ ಇದ್ದಾಗಿದ್ದೇ ಎನ್ನಲಾಗಿದೆ. ಸ್ದಳಕ್ಕೆ ಸಚಿವ ಸುಧಾಕರ್ ಮತ್ತು ಜಿಲ್ಲಾಡಳಿತ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಚಾಲಕ ರಿಯಾಜ್ ಪವಾಡ ಸದೃಶವಾಗಿ ಬದುಕುಳಿದಿದ್ದು, ಆತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿಸಿಗಲಿ. ಸಂತ್ರಸ್ತರ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ಸಿಗಲಿ. ಹಾಗೂ ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಕಚೇರಿ ಟ್ವೀಟ್ ಮೂಲಕ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.