ಅಪ್ಪ, ಮಗನಿಂದ ಗೊಂದಲ ಮೂಡಿಸಲು ಯತ್ನ: ಬಿಎಸ್ ವೈ ವಿರುದ್ದ ಯತ್ನಾಳ್ ಗುಡುಗು
ತಮಗೆ ಹೈಕಮಾಂಡ್ ನಿಂದ ಯಾವುದೇ ಬುಲಾವ್ ಅಥವಾ ಸಮಯ ನೀಡಿ ವಿಚಾರಣೆಗೆ ಬರುವಂತೆ ವಿಚಾರಣೆಗೆ ಕರೆದಿಲ್ಲ. ತಾವು ನಾಯಕರ ಭೇಟಿಗೂ ಸಮಯ ಕೇಳಿಲ್ಲ. ಆದರೆ ತಂದೆ ಮತ್ತು ಮಗ ಸುಳ್ಳು ಸುದ್ದಿ ಹಬ್ಬಿಸಿ ಜನರಲ್ಲಿ, ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತೆ ಗುಡುಗಿದ್ದಾರೆ.
2 ಎ ಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ನಡೆದ ಪಂಚಮಸಾಲಿಗಳ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಪಕ್ಚದ ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದ ವರಿಷ್ಠರು ಕರೆಸಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ರು.
ಇದರ ಬೆನ್ನಲ್ಲೇ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು,ವಿಜಯಪುರದ ಸಿದ್ಧೇಶ್ವರ ಸಂಸ್ಥೆ ನಿರ್ಮಿಸಿರುವ ಭಾರತ ರತ್ನ ಅಟಲ ಬಿಹಾರಿ ವಾಜಪೇಯಿ ಶಿಶು ನಿಕೇತನ ಶಾಲೆಯ ಸಿಬಿಎಸ್‌ಇ ನೋಂದಣಿಯ ತುರ್ತು ಕೆಲಸ ಇದ್ದ ಕಾರಣ ದೆಹಲಿಗೆ ಬಂದಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಚಿಚರಾದ ಸಿ.ಸಿ.ಪಾಟೀಲ್ ಹಾಗೂ ಮುರುಗೇಶ್ ನಿರಾಣಿ ತಮ್ಮ ಹಾಗೂ ಸ್ವಾಮೀಜಿಯ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರಿಬ್ಬರಿಗೆ ಸೂಕ್ತ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.
ಹಿಂದೂ ಸಮಾಜದಲ್ಲಿನ ಸಾಮಾಜಿಕ ನ್ಯಾಯಕ್ಕಾಗಿ ನನ್ನ ಹೋರಾಟ ನಿಲ್ಲುವುದಿಲ್ಲ. ಅಂಜುವುದಿಲ್ಲ, ಬಗ್ಗುವುದೂ ಇಲ್ಲ ಮತ್ತು ಪಲಾಯನ ಇಲ್ಲವೇ ಇಲ್ಲ ಎಂದು ಯತ್ನಾಳ್ ಎದುರಾಳಿಗಳಿಗೆ ತಿರುಗೇಟು ನೀಡಿದ್ದಾರೆ.