ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ
ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಅಧಿಕೃತವಾಗಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಲಾಗಿದೆ.
ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಇಂದು ಅಧಿಸೂಚನೆ ಹೊರಡಿಸಿದೆ.
ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ ಕಳೆದ ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ನೆನ್ನೆಯಷ್ಟೇ ಕೇಂದ್ರ ಸಚಿವ ಸಂಪುಟ ಸಭೆ ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿತ್ತು.
ರಾಷ್ಟ್ರಪತಿಗಳು ಈ ಸಂಬಂಧ ಸಹಿಹಾಕಿದ್ದಾರೆ ಕೆಲವೇ ತಿಂಗಳಲ್ಲಿ ಪುರುಷರಿಗೆ ವಿಧಾನಸಭೆ ಚುನಾವಣೆ ನಡೆಯುವುದಕ್ಕೂ ಮುನ್ನ ರಾಷ್ಟ್ರಪತಿ ಆಡಳಿತ ಜಾರಿ ಮಾಡಲಾಗಿದೆ.
ಆಡಳಿತರೂಢ ಕಾಂಗ್ರೆಸ್ ಪಕ್ಷದ ಹಲವು ಶಾಸಕರು ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಾರಾಯಣಸ್ವಾಮಿ ನೇತೃತ್ವ ಸರ್ಕಾರ ಅಲ್ಪಮತಕ್ಕೆ ಕುಸಿದ ಅನಿವಾರ್ಯವಾಗಿ ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿತ್ತು