ಜಲ ಸಂರಕ್ಷಣೆಯ ಜವಾಬ್ದಾರಿಯ ಅರಿವು ಅಗತ್ಯ: ಮನ್ ಕಿ ಬಾತ್‌ನಲ್ಲಿ ಮೋದಿ ಅಭಿಮತ!

ಹೈಲೈಟ್ಸ್‌:

  • ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ.
  • ಜಲ ಸಂರಕ್ಷಣೆಯ ಜವಾಬ್ದಾರಿಯ ಅರಿವು ಅಗತ್ಯ ಎಂದ ಪ್ರಧಾನಿ ಮೋದಿ.
  • ಕೇಂದ್ರ ಸರ್ಕಾರದ ಜಲ ಸಂರಕ್ಷಣೆಯ ಅಭಿಯಾನಕ್ಕೆ ಕೈಜೋಡಿಸುವಂತೆ ಪ್ರಧಾನಿ ಕರೆ.
  • ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ.
  • ಆತ್ಮನಿರ್ಭರ ಭಾರತ ಯೋಜನೆಗೆ ಮತ್ತಷ್ಟು ವೇಗ ನೀಡುವ ಭರವಸೆ ನೀಡಿದ ಪ್ರಧಾನಿ.

ಹೊಸದಿಲ್ಲಿ: ಜಲ ಸಂರಕ್ಷಣೆಯ ಜವಾಬ್ದಾರಿಯ ಅರಿವು ಹೊಂದುವುದು ದೇಶದ ತುರ್ತು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಪಾಲಿನ ಕರ್ತವ್ಯವನ್ನು ನಿರ್ವಹಿಸಬೇಕಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಇಂದು(ಫೆ.28-ಭಾನುವಾರ) ತಮ್ಮ ‘ಮನ್ ಕಿ ಬಾತ್‘ ರೇಡಿಯೋ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜಲ ಸಂರಕ್ಷಣೆ ರಾಷ್ಟ್ರೀಯ ಜವಾಬ್ದಾರಿ ಎಂಬುದನ್ನು ನಾವು ಅರಿಯಬೇಕಿದೆ ಎಂದು ಹೇಳಿದರು.

ಜಲ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಈ ಯೋಜನೆಗಳನ್ನು ದೇಶದ ಮೂಲೆ ಮೂಲೆಗೂ ಕೊಂಡೊಯ್ದು ಯಶಸ್ವಿಗೊಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಪ್ರಧಾನಿ ಮೋದಿ ನುಡಿದರು.

ಇದೇ ವೇಳೆ ದೇಶಕ್ಕೆ ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ನಮ್ಮಯುವ ಪೀಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತದಲ್ಲಿ ಮಾಡುತ್ತಿರುವ ಸಾಧನೆಯನ್ನು ಜಗತ್ತು ಗಮನಿಸುತ್ತಿದೆ ಎಂದು ಹೆಮ್ಮೆಯಿಂದ ನುಡಿದರು.

ದೇಶ ಎಲ್ಲಾ ಕ್ಷೇತ್ರಗಳಲ್ಲಿ ಆತ್ಮನಿರ್ಭರವಾಗಬೇಕಿರುವುದು ಅತ್ಯಂತ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತ ಯೋಜನೆಗೆ ಮತ್ತಷ್ಟು ವೇಗ ನೀಡಲಾಗುವುದು ಎಂದು ಪ್ರಧಾನಿ ಮೋದಿ ಇದೇ ವೇಳೆ ಭರವಸೆ ನೀಡಿದರು.

ಕೊರೊನಾ ವೈರಸ್ ಹಾವಳಿಯ ನಡುವೆಯೂ ದೇಶ ಅತ್ಯಂತ ದೃಢ ಹೆಜ್ಜೆಗಳನ್ನು ಇಡುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಕಂಡುಬರುತ್ತಿರುವುದು ಸಂತಸದ ಸಂಗತಿ ಎಂದು ಪ್ರಧಾನಿ ಮೋದಿ ಹೇಳಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *