ನಾಳೆಯಿಂದ ಬಜೆಟ್ ಅಧಿವೇಶನ: ಮೊದಲೆರಡು ದಿನ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಚರ್ಚೆ
ಬೆಂಗಳೂರು: ಮಾರ್ಚ್ 4 ರಿಂದ ಎರಡು ದಿನಗಳ ಕಾಲ ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಚರ್ಚೆಗೆ ಸಾಕ್ಷಿಯಾಗಲಿದೆ. ಚರ್ಚೆಯ ನಂತರ ಎರಡೂ ಸದನಗಳ ಅಭಿಪ್ರಾಯಗಳನ್ನು ರಾಷ್ಟ್ರ ರಾಜಧಾನಿ ನವದೆಹಲಿಗೆ ರವಾನಿಸಲಾಗುವುದು.. ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ ಆಗಲಿದ್ದು ಅಧಿವೇಶನವು ಮಾರ್ಚ್ 31 ರವರೆಗೆ ನಡೆಯಲಿದೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿವೇಶನ ಮಾರ್ಚ್ 4 ರಿಂದ ಪ್ರಾರಂಭವಾಗಲಿದ್ದು, ಮೊದಲ ಎರಡು ದಿನಗಳನ್ನು “ಒಂದು ರಾಷ್ಟ್ರ ಒಂದು ಚುನಾವಣೆ” ಪರಿಕಲ್ಪನೆಯ ಚರ್ಚೆಗೆ ಮೀಸಲಿಡಲಾಗುವುದು ಎಂದು ಹೇಳಿದರು. ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. “ನಾವು ಯಾವುದೇ ನಿರ್ಣಯವನ್ನು ರವಾನಿಸಲು ಅಥವಾ ನೀತಿಯನ್ನು ರೂಪಿಸಲು ಸಾಧ್ಯವಿಲ್ಲ. ಆದರೆ ಚರ್ಚಿಸಬಹುದು ಮತ್ತು ನಮ್ಮ ಅಭಿಪ್ರಾಯವನ್ನು ರಾಷ್ಟ್ರಪತಿ, ಪ್ರಧಾನಿ ಮತ್ತು ಭಾರತದ ಮುಖ್ಯ ಚುನಾವಣಾ ಆಯೋಗಕ್ಕೆ ಕಳುಹಿಸಬಹುದು, ’’ ಕಾಗೇರಿ ಹೇಳಿದ್ದಾರೆ.
ಅಧಿವೇಶನಕ್ಕೆ ಹಾಜರಾಗದ ಅಥವಾ ಗೈರು ಹಾಜರಾಗಿರುವ ಅಧಿಕಾರಿಗಳು ಮತ್ತು ಶಾಸಕರನ್ನು ಗಮನದಲ್ಲಿಟ್ಟುಕೊಂಡು ಕಾಗೇರಿ ಹಲವಾರು ದೂರುಗಳು ಬಂದಿವೆ ಎಂದು ಗಮನ ಸೆಳೆದರು. “ಶಿಸ್ತು ತರಲು, ನಾನು ಎರಡೂ ಪಕ್ಷಗಳ ಮುಖ್ಯ ನಾಯಕರೊಂದಿಗೆ ಹಾಗೂ ಮುಖ್ಯ ಕಾರ್ಯದರ್ಶಿಯೊಂದಿಗೆ ಮಾತನಾಡಿದ್ದೇನೆ,” ಎಂದು ಅವರು ಹೇಳಿದರು. ಶಾಸಕಾಂಗ ಮಂಡಳಿ ಅಧ್ಯಕ್ಷ ಬಸವರಾಜ್ ಹೊರಟ್ಟಿ ಅವರೂ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪದ ಬಗ್ಗೆ ಚರ್ಚಿಸುವುದಾಗಿ ಹೇಳಿದರು. ಸದನದಲ್ಲಿ ಹೆಚ್ಚಿನ ಶಿಸ್ತು ತರಲು ಒತ್ತು ನೀಡುವುದಾಗಿ ಅವರು ಇದೇ ವೇಳೆ ಹೇಳಿದ್ದಾರೆ..