ಜಿಪಂ ಚುನಾವಣೆ ವೇಳೆಗೆ ಸೂಕ್ತ ನಿರ್ಧಾರ:ಮಧು ಬಂಗಾರಪ್ಪ
ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ವೇಳೆಗೆ ತಮ್ಮ ರಾಜಕೀಯ ಜೀವನದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಜೆಡಿಎಸ್ ತೊರೆದು ಕಾಂಗ್ರೆಸ್ ನತ್ತ ಮುಖಮಾಡಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಊಹಾಪೋಹಗಳು ಕೇಳಿ ಬರುತ್ರಿರುವ ಸಂದರ್ಭದಲ್ಲಿ ಅವರು ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ.
ನಗರದ ತಮ್ಮ ನಿವಾಸದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, ಬೆಂಬಲಿಗರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.
ದಶಕದ ಅವಧಿಯಲ್ಲಿ ಜಾತ್ಯತೀತ ಜನತಾದಳ ಉತ್ತಮ ಅವಕಾಶಗಳನ್ನು ನೀಡಿದೆ.ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ದೇವೇಗೌಡರನ್ನು ಮರೆಯುವುದಿಲ್ಲ. ಆದರೆ ಕೆಲವೊಂದು ಬೆಳವಣಿಗೆಗಳು ಬಹಳ ಬೇಸರ ಉಂಟು ಮಾಡಿವೆ. ತಾವೂ ಎಂದೂ ಅಧಿಕಾರ ಬಯಸಿರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.